ಕಾಶ್ಮೀರದಲ್ಲಿ ಹೆಚ್ಚಿದ ಹಿಂಸಾಚಾರ: ಕೇಂದ್ರ ಗೃಹ ಸಚಿವರಿಂದ ಸಭೆ

0
502

 
ವರದಿ: ಲೇಖಾ
ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ಉಗ್ರ ಬುರ್ಹಾನ್ ಮುಜಾಫರ್ ವನಿ ಹತ್ಯೆಯ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಪ್ರತಿಭಟನೆಗಳಿಗೆ ಬಲಿಯಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
 
 
ಈ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಕುರಿತು ಉನ್ನತ ಮಟ್ಟದ ಸಮಾಲೋಚನಾ ಸಭೆ ನಡೆಸಿದ್ದಾರೆ.
 
 
 
ರಾಜನಾಥ್ ಸಿಂಗ್ ಅವರು ದೆಹಲಿಯ ತಮ್ಮ ನಿವಾಸದಲ್ಲಿ ಅಧಿಕಾರಿಗಳ ಸಭೆ ಕರೆದಿದ್ದು ಗೃಹ ಕಾರ್ಯದರ್ಶಿ, (ಕಾಶ್ಮೀರ ವಿಭಾಗದ ಜಂಟಿ ಕಾರ್ಯದರ್ಶಿ, ಮಾಹಿತಿ ಮತ್ತು ಪ್ರಸಾರ ಮುಖ್ಯಸ್ಥರು ಹಾಗೂ ಗೃಹ ವ್ಯವಹಾರಗಳ ಸಚಿವಾಲಯದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
 
 
ಕುಲಗಮ್ ಅನಂತನಾಗ್, ದಕ್ಷಿಣ ಕಾಶ್ಮೀರ ಪ್ರದೇಶಗಳಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಘಟನೆಯಲ್ಲಿ ಸಾವನ್ನಪ್ಪಿದ ಸಂಖ್ಯೆ 16ಕ್ಕೆ ಏರಿದೆ. ಸುಮಾರು 100 ಮಂದಿ ಭದ್ರತಾ ಸಿಬ್ಬಂದಿ ಸೇರಿದಂತೆ 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here