ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸುಷ್ಮಾ

0
293

ರಾಷ್ಟ್ರೀಯ ಪ್ರತಿನಿಧಿ ವರದಿ
ವಿದೇಶಾಂಗ ವ್ಯವಹಾರಗಳ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಅವರು ಕಿಡ್ಮಿ ವೈಫಲ್ಯದಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
 
 
ಈ ಬಗ್ಗೆ ಸಚಿವೆ ಸುಪ್ಮಾಸ್ವರಾಜ್ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ. ಏಮ್ಸ್ ವೈದ್ಯರು ಸುಷ್ಮಾಗೆ ಕಿಡ್ನಿ ಕಸಿಗಾಗಿ ಸಿದ್ಧತೆ ಮಾಡಿಕೊಂಡಿದ್ದಾರೆ.
ಕಿಡ್ನಿ ವೈಫಲ್ಯದಿಂದಾನಿ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಿಡ್ನಿ ಕಸಿ ಮಾಡಲು ಎಲ್ಲಾ ರೀತಿಯ ಸಿದ್ಧತೆ ನಡೆಯುತ್ತಿದೆ. ಸದ್ಯ ವೈದ್ಯರು ನನಗೆ ಡಯಾಲಿಸಿಸ್ ಚಿಕಿತ್ಸೆ ನೀಡುತ್ತಿದ್ದಾರೆ. ನನಗೆ ಭಗವಾನ್ ಶ್ರೀಕೃಷ್ಣ ಶ್ರೀರಕ್ಷೆ ಇದೆ ಎಂದು ಸಚಿವೆ ಸುಷ್ಮಾ ಸ್ವರಾಜ್ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here