ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

0
310

ಮ0ಗಳೂರು ಪ್ರತಿನಿಧಿ ವರದಿ
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ 2015-16 ನೇ ಸಾಲಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರ ಅಭಿವೃದ್ಧಿಗಾಗಿ ಕನಿಷ್ಟ 5 ವರ್ಷಗಳಿಂದ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಇತರೆ 5 ಕ್ಷೇತ್ರಗಳಾದ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
 
 
ವೀರ ಮಹಿಳೆ ಪ್ರಶಸ್ತಿಗೆ 18 ರಿಂದ 45 ವಯೋಮಿತಿ ಒಳಗಿನ ಮಹಿಳೆಯು ಆಪತ್ಕಾಲದಲ್ಲಿರುವ ಮತ್ತೊಬ್ಬ ವ್ಯಕ್ತಿಯ ಜೀವ ಕಾಪಾಡಲು ಅಥವಾ ಪ್ರಾಣ ರಕ್ಷಿಸಲು ತನ್ನ ಜೀವದ ಹಂಗನ್ನು ತೊರೆದು ಸಮಯಪ್ರಜ್ಞೆಯಿಂದ ಧೈರ್ಯ, ಸಾಹಸದೊಂದಿಗೆ ಅಪಾಯದಲ್ಲಿರುವ ವ್ಯಕ್ತಿಯ ಜೀವ ಕಾಪಾಡಿದಂತಹ ಕಾರ್ಯವನ್ನು ಮಾಡಿದ್ದು, ಈ ಸಾಧನೆಯು ಸಾರ್ವಜನಿಕರ ಗಮನಕ್ಕೆ ಬಂದಿರಬೇಕು.
 
 
ಅರ್ಜಿಯನ್ನು ಡಿಸೆಂಬರ್ 9ರೊಳಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಾಸ್ಟೋರ್, ಅಶೋಕನಗರ ಅಂಚೆ, ಮಂಗಳೂರು-575006 ಈ ಕಛೇರಿಯಿಂದ ಪಡೆದು ಸಲ್ಲಿಸಬೇಕು.

LEAVE A REPLY

Please enter your comment!
Please enter your name here