ಕೃತಿಗಳ ಆಹ್ವಾನ

0
449
ವರದಿ: ಲೇಖಾ
ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷದಂತೆ 2015ನೇಯ ವರ್ಷದ ಪುಸ್ತಕ ಬಹುಮಾನ ಯೋಜನೆಗಾಗಿ ಈ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಆಹ್ವಾನಿಸಿದೆ. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2015 ರ ಜನವರಿ 1 ರಿಂದ 2015 ರ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯ ತಾಂತ್ರಿಕ ಪುಟದಲ್ಲಿ ಪ್ರಥಮ ಮುದ್ರಣ 2015 ಎಂದು ಮುದ್ರಿತವಾಗಿರಬೇಕು.
ಈ ಅವಧಿಯಲ್ಲಿ ಪ್ರಕಟವಾದ ಪುಸ್ತಕಗಳ ಒಂದೊಂದು ಪ್ರತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು – 560 002 ಇವರಿಗೆ ರಿಜಿಸ್ಟರ್ಡ್ ಅಂಚೆ/ಕೊರಿಯರ್ ಮೂಲಕ ಅಥವಾ ಖುದ್ದಾರಿ 2016 ರ ಜುಲೈ 10 ರೊಳಗೆ ತಲುಪಿಸಬೇಕಾಗಿ ಕೋರಿದೆ. ಕಳುಹಿಸಲ್ಪಡುವ ಕೃತಿಯು ವಿವಿಧ ಪ್ರಕಾರಗಳಲ್ಲಿ ಯಾವ ಸಾಹಿತ್ಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು.

LEAVE A REPLY

Please enter your comment!
Please enter your name here