ಕೃಷಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

0
249

ಬೆಂಗಳೂರು ಪ್ರತಿನಿಧಿ ವರದಿ
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ರಾಜ್ಯ ಮಟ್ಟದ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ (ತನ್ನ ಆಡಳಿತದ ವ್ಯಾಪ್ತಿಯಲ್ಲಿ ಬರುವ 10 ಜಿಲ್ಲೆಗಳ) ಆಸಕ್ತ ರೈತ ಹಾಗೂ ರೈತ ಮಹಿಳೆಯರಿಂದ ಕೃಷಿ ಪ್ರಶಸ್ತಿಗಳಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ.
 
 
ರಾಜ್ಯದ ಮಟ್ಟದಲ್ಲಿ ದಿವಂಗತ ಸಿ. ಭೈರೇಗೌಡ ರಾಜ್ಯ ಮಟ್ಟದ ರೈತ ಪ್ರಶಸ್ತಿ, ದಿವಂಗತ ಡಾ. ಎಂ.ಹೆಚ್. ಮರಿಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈ ಪ್ರಶಸ್ತಿ, ದಿವಂಗತ ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ ಪ್ರಶಸ್ತಿ, ಹಾಗೂ ಆರ್. ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ ಹಾಗೂ ಕೆನರಾ ಬ್ಯಾಂಕ್ ಪ್ರಾಯೋಜಿತ ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿಗಳನ್ನು ನೀಡಲಾಗುವುದು.
 
 
 
ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ, ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿಗಳನ್ನು ನೀಡಲಾಗುವುದು. ತಾಲ್ಲೂಕು ಮಟ್ಟದಲ್ಲಿ ಅತ್ಯುತ್ತಮ ಯುವ ರೈತ ಪ್ರಶಸ್ತಿ, ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಮಹಿಳೆ ಪ್ರಶಸ್ತಿಗಳನ್ನು ನೀಡಲಾಗುವುದು.
 
 
ಮೇಲಿನ ಪ್ರಶಸ್ತಿಗಳನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ನವೆಂಬರ್ – 2016 ರ ಸಂದರ್ಭದಲ್ಲಿ ನೀಡಲಾಗುತ್ತದೆ. ನಿಗದಿತ ಅರ್ಜಿ ನಮೂನೆಯು ಆಯಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರವರ ಕಚೇರಿ, ವಿಸ್ತರಣಾ ನಿರ್ದೇಶಕರ ಕಚೇರಿ, ಹೆಬ್ಬಾಳ, ಬೆಂಗಳೂರು, ಕೃಷಿ ವಿಜ್ಞಾನ ಕೇಂದ್ರಗಳು (ಹಾಡೋನಹಳ್ಳಿ-ದೊಡ್ಡಬಳ್ಳಾಪುರ, ಚಂದುರಾಯನಹಳ್ಳಿ-ಮಾಗಡಿ, ಕಂದಲಿ-ಹಾಸನ, ಕೊನೇಹಳ್ಳಿ-ತಿಪಟೂರು, ವಿ.ಸಿ. ಫಾರಂ-ಮಂಡ್ಯ, ಕುರುಬೂರು ಫಾರಂ-ಚಿಂತಾಮಣಿ ಮತ್ತು ಹರದನಹಳ್ಳಿ-ಚಾಮರಾಜನಗರ) ವಿಸ್ತರಣಾ ಶಿಕ್ಷಣ ಘಟಕ (ನಾಗನಹಳ್ಳಿ-ಮೈಸೂರು) ದಲ್ಲಿ ದೊರೆಯುತ್ತದೆ.
 
 
ಅರ್ಜಿ ನಮೂನೆಯು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್‍ನಲ್ಲೂ (www.uasbangalore.edu.in) ಲಭ್ಯವಿರುತ್ತದೆ.
ಭರ್ತಿಮಾಡಿದ ಅರ್ಜಿಯನ್ನು ಸಲ್ಲಿಸಲು ಅಕ್ಟೋಬರ್ 8 ರಂದು ಕೊನೆಯ ದಿನವಾಗಿರುತ್ತದೆ. ಹೆಚ್ದಿನ ವಿವರಗಳಿಗೆ ವಿಸ್ತರಣಾ ನಿರ್ದೇಶಕರ ಕಚೇರಿ, ಕೃಷಿ ವಿಶ್ವವಿದ್ಯಾನಿಲಯ, ಹೆಬ್ಬಾಳ, ಬೆಂಗಳೂರು – 560 024 ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ – 080 – 23418883.

LEAVE A REPLY

Please enter your comment!
Please enter your name here