ಕೃಷ್ಣ ಬಿಜೆಪಿ ಸೇರ್ಪಡೆ ಖಚಿತ

0
291

ಬೆಂಗಳೂರು ಪ್ರತಿನಿಧಿ ವರದಿ
ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರು ಬಿಜೆಪಿ ಸೇರುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.
 
 
ಈ ಕುರಿತು ಕಲಬುರಗಿಯಲ್ಲಿ ಮಾತನಾಡಿದ ಬಿಎಸ್ ವೈ ಕೃಷ್ಣ ಕಾಂಗ್ರೆಸ್‌ ತೊರೆದ ಮೇಲೆ ಬಿಜೆಪಿ ರಾಷ್ಟ್ರೀಯ ನಾಯಕರು ಕೃಷ್ಣ ಅವರ ನಿರಂತರ ಸಂಪರ್ಕದಲ್ಲಿದ್ದಾರೆ. ಕೃಷ್ಣ ಅವರು ರಾಜೀನಾಮೆ ನೀಡಿದ ನಂತರ ಮಾಜಿ ಉಪ ಮುಖ್ಯಮಂತ್ರಿ ಆರ್‌. ಅಶೋಕ್‌ ಸೇರಿ ಅನೇಕ ಬಿಜೆಪಿ ನಾಯಕರು ಕೃಷ್ಣ ಅವರ ಮನೆಗೆ ತೆರಳಿ ಮಾತುಕತೆ ನಡೆಸಿದ್ದರು. ಈಗಾಗಲೇ ಎಲ್ಲಾ ಮಾತುಕತೆ ಹಂತ ಮುಕ್ತಾಯವಾಗಿದೆ.
 
 
ಕೃಷ್ಣ ಅವರು ಯಾವುದೇ ಬೇಡಿಕೆ ಇಟ್ಟು ಬಿಜೆಪಿಗೆ ಸೇರ್ಪಡೆಯಾಗುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಅಪಾರ ಗೌರವಿದೆ. ಹೀಗಾಗಿ ನಾನು ಬಿಜೆಪಿ ಸೇರುತ್ತಿದ್ದೇನೆ ಎಂದು ಎಸ್ ಎಂ ಕೃಷ್ಣ ಹೇಳಿದ್ದಾರೆ ಎಂದು ಬಿಎಸ್ ವೈ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here