ಕೆಎಸ್ ಆರ್ ಟಿಸಿ ಮತ್ತಷ್ಟು ಹೈಟೆಕ್ ಆಗಬೇಕಿದೆ

0
228

ಬೆಂಗಳೂರು ಪ್ರತಿನಿಧಿ ವರದಿ
ಕೆಎಸ್ ಆರ್ ಟಿಸಿ ಸಂಸ್ಥೆಗೆ ಪ್ರತಿಷ್ಠಿತ ಲಿಮ್ಕಾ ಪ್ರಶಸ್ತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಂಬಾ ಸಂತೋಷಪಟ್ಟಿದ್ದಾರೆ. ಇದೇ ರೀತಿ ಮತ್ತಷ್ಟು ಸಾಧನೆ ಮಾಡಿ ಎಂದು ಹಾರೈಸಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
 
 
 
ಬೆಂಗಳೂರಿನಲ್ಲಿ ಮಾತನಾಡಿದ ಸಾರಿಗೆ ಸಚಿವರು, ಕೆಎಸ್ ಆರ್ ಟಿಸಿಯನ್ನು ಮತ್ತಷ್ಟು ಹೈಟೆಕ್ ಮಾಡಬೇಕಾಗಿದೆ. ಉಚಿತ ವೈಫೈ ಸೇರಿದಂತೆ ಇನ್ನಿತರ ಸೌಲಭ್ಯ ಕಲ್ಪಿಸಬೇಕಿದೆ. ಇದಕ್ಕಾಗಿ ಸಿಎಂ ಬಳಿ 70 ಕೋಟಿ ರೂ. ಅನುದಾನ ಬೇಡಿಕೆ ಇಡಲಾಗಿದೆ.
 
 
ಟೋಲ್ ಗಳಲ್ಲಿ ಸಾರಿಗೆ ಸಂಸ್ಥೆ ಬಸ್ ಗಳಿಗಾಗಿ ಪ್ರತ್ಯೇಕ ಲೇನ್ ಸೇರಿ ಇವೆಲ್ಲದರ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಜತೆಗೆ ಚರ್ಚಿಸಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here