'ಕೆಕೆಎಫ್ ಸಿ ಕಪ್-2017' ಮುಕ್ತ ಫುಟ್ಬಾಲ್ ಪಂದ್ಯಾವಳಿಗೆ ಮಾ.10 ರಂದು ಚಾಲನೆ

0
250

ಮಡಿಕೇರಿ ಪ್ರತಿನಿಧಿ ವರದಿ
ಕೆಕೆಎಫ್ ಸಿ ಚೆಟ್ಟಳ್ಳಿ ಫುಟ್ಬಾಲ್ ಸಂಸ್ಥೆ ವತಿಯಿಂದ ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಸಹಕಾರದೊಂದಿಗೆ ಮಾ.10 ರಿಂದ 12ರವರೆಗೆ ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ‘ಕೆಕೆಎಫ್ಸಿ ಕಪ್-2017’ ಮುಕ್ತ ಸೂಪರ್ ನೈನ್ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ.
 
 
ಸುದ್ದಿಗೋಷ್ಠಿಯಲ್ಲಿ ಕೆಕೆಎಫ್ಸಿ ಸಂಸ್ಥೆಯ ಕಾರ್ಯದರ್ಶಿ ಜುಬೇರ್ ಮಾತನಾಡಿ, ಕೆಕೆಎಫ್ಸಿ ಸಂಸ್ಥೆ ಕಳೆದ ಮೂರು ವರ್ಷಗಳಿಂದ ಸೂಪರ್ ಫೈವ್ ಫುಟ್ಬಾಲ್ ಪಂದ್ಯಾವಳಿಯನ್ನು ಆಯೋಜಿಸಿಕೊಂಡು ಬರುತ್ತಿದ್ದು, ಈ ಬಾರಿ ಸೂಪರ್ ನೈನ್ ಪಂದ್ಯಾವಳಿಯನ್ನು ಆಯೋಜಿಸಿದೆ. ನಾಕ್ ಔಟ್ ಮಾದರಿಯ ಈ ಪಂದ್ಯಾವಳಿಯಲ್ಲಿ ಜಿಲ್ಲೆ ಮತ್ತು ಹೊರ ಜಿಲ್ಲೆಯ 30 ಕ್ಕೂ ಹೆಚ್ಚಿನ ತಂಡಗಳು ಪಾಲ್ಗೊಳ್ಳಲಿವೆಯೆಂದು ತಿಳಿಸಿದರು.
 
 
ಪಂದ್ಯಾವಳಿ ವಿಜೇತ ತಂಡಕ್ಕೆ ಪ್ರಥಮ ಬಹುಮಾನವಾಗಿ 25 ಸಾವಿರ ರೂ. ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ 15 ಸಾವಿರ ನಗದು ಹಾಗೂ ಟ್ರೋಫಿ ಮತ್ತು ತೃತೀಯ ಬಹುಮಾನವನ್ನು ನೀಡಲಾಗುವುದೆಂದು ಹೇಳಿದರು. ಪಂದ್ಯಾವಳಿಯಲ್ಲಿ ಭಾಗವಹಿಸುವ ತಂಡಗಳು ಮೈದಾನ ಶುಲ್ಕ 2000 ರೂ.ಗಳೊಂದಿಗೆ ಮಾ. 5 ರ ಒಳಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜುಬೇರ್ ತಿಳಿಸಿದರು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8277560862, 9481770763 ಸಂಪರ್ಕಿಸಬಹುದಾಗಿದೆ.
 
 
ಕೆಕೆಎಫ್ ಸಿ ಸಂಸ್ಥೆಯು ಕೇವಲ ಕ್ರೀಡೆ ಮಾತ್ರವಲ್ಲದೆ ಸಾಮಾಜಿಕ ಚಟುವಟಿಕೆಗಳಲ್ಲು ತೊಡಗಿಸಿಕೊಂಡಿದ್ದು, ರಕ್ತದಾನ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿದೆಯೆಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕ್ರೀಡಾ ಕಾರ್ಯದರ್ಶಿ ಜಂಷದ್, ಸಹ ಕಾರ್ಯದರ್ಶಿ ರವಿ, ಖಜಾಂಚಿ ಲತೀಫ್, ವಿನೋದ್ ಕುಮಾರ್, ಶರಿನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here