ಕೆಪಿಎಲ್ ಟಿ ಉಗ್ರರ ಹತ್ಯೆ

0
327

ರಾಷ್ಟ್ರೀಯ ಪ್ರತಿನಿಧಿ ವರದಿ
ಕಾರ್ಬಿ ಪೀಪಲ್ಸ್ ಲಿಬರೇಷನ್ ಟೈಗರ್(ಕೆಪಿಎಲ್‌ಟಿ) ಉಗ್ರರ ಹಿರಿಯ ನಾಯಕರು ಸೇರಿದಂತೆ ಆರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದ ಘಟನೆ ಅಸ್ಸಾಂನಲ್ಲಿ ನಡೆದಿದೆ.
 
 
ಅಸ್ಸಾಂಮಿನ ಕಾರ್ಬಿ ಆಂಗ್ಲಾಂಗ್ ಜಿಲ್ಲೆಯ ಬನ್ನಿಪತ್ತರ್ ನಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ನಡುವಿನ ಗುಂಡಿನ ಕಾಳಗದಲ್ಲಿ 6 ಮಂದಿ ಉಗ್ರರು ಹತ್ಯೆ ಮಾಡಲಾಗಿದ್ದು, ಓರ್ವ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
 
 
ಗುಂಡಿನ ಕಾಳದಲ್ಲಿ ಗಾಯಗೊಂಡಿರುವ ಭದ್ರತಾ ಸಿಬ್ಬಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಉಗ್ರರಿಂದ ಒಂದು ಎಸ್ಎಲ್ಆರ್ ರೈಫಲ್, ಒಂದು ಇನ್ಸಾಸ್ ರೈಫಲ್, ಮೂರು ಪಿಸ್ತೂಲ್ ಹಾಗೂ ಎರಡು ಗ್ರೈನೇಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here