ಪ್ರಮುಖ ಸುದ್ದಿವಾರ್ತೆವಿದೇಶ

ಕೆಫೆ ಮೇಲೆ ಉಗ್ರರ ದಾಳಿ: 2 ಸಾವು

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ಸ್ವಿಜರ್​ಲೆಂಡ್​ನ ಪ್ರತಿಷ್ಠಿತ ಕೆಫೆ ಮೇಲೆ ದಾಳಿ ನಡೆಸಿದ್ದಾರೆ ವಾಯುವ್ಯ ಸ್ವಿಜರ್​ಲೆಂಡ್​ ಬಸೆಲ್ ನ ಪ್ರತಿಷ್ಠಿತ ಕೆಫೆ 56 ಮೇಲೆ ಶಸ್ತ್ರಾಸ್ತ್ರಧಾರಿಗಳು ಗುರುವಾರ ರಾತ್ರಿ ದಾಳಿ ನಡೆಸಿದ್ದಾರೆ.
 
 
 
ಉಗ್ರರ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರಿಗೆ ಗಂಭೀರವಾಗಿ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
 
 
ರಾತ್ರಿ ಕೆಫೆ ನುಗ್ಗಿದ ಶಸ್ತ್ರಾಸ್ತ್ರಧಾರಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಇಬ್ಬರು ಗ್ರಾಹಕರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ದಾಳಿಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.

Comment here