ಕೇಂದ್ರ ಸಚಿವೆ ಉಮಾ ಭಾರತಿ ಆಸ್ಪತ್ರೆಗೆ ದಾಖಲು

0
244

 
ವರದಿ: ಲೇಖಾ
ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾ ಭಾರತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
 
ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ನಾನ ಸಂಸ್ಥೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಮಾ ಭಾರತಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
 
ಉಮಾ ಭಾರತಿ ಆರೋಗ್ಯ ಸ್ಥಿರವಾಗಿರುವ ಕುರಿತು ಆಸ್ಪತ್ರೆ ವೈದ್ಯ ಡಾ.ರಾಜೇಶ್ ಮಲ್ಹೋತ್ರಾ ಸ್ಪಷ್ಟಪಡಿಸಿದ್ದಾರೆ.
ದೆಹಲಿಯ ಅಕ್ಬರ್ ರಸ್ತೆಯಲ್ಲಿನ ನಿವಾಸದಲ್ಲಿ ಕಛೇರಿ ಕೆಲಸದಲ್ಲಿ ನಿರತರಾಗಿದ್ದಾಗ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡ ಪರಿಣಾಮ ಉಮಾ ಭಾರತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಜಲ ಸಂಪನ್ಮೂಲ ಸಚಿವಾಲಯದ ವಕ್ತಾರ ಸಮೀರ್ ಸಿನ್ಹಾ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here