ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

0
405

 
ಮೂಡಬಿದಿರೆ ಪ್ರತಿನಿಧಿ ವರದಿ
ಹಲವು ಬಾರಿ ಡೀಸೆಲ್-ಪೆಟ್ರೋಲ್ ದರವನ್ನು ಏರಿಕೆ ಮಾಡುತ್ತಿರುವ ಕೇಂದ್ರ ಸರಕಾರ ಇದೀಗ ಗ್ಯಾಸ್ ಸಿಲಿಂಡರ್ ಗೆ ಏಕಾಏಕಿ 86 ರುಪಾಯಿ ಏರಿಕೆ ಮಾಡಿದೆ. ಈ ಧೋರಣೆ ಸರಿಯಲ್ಲ. ಕೇಂದ್ರ ಸರಕಾರ ತಕ್ಷಣ ಗ್ಯಾಸ್ ದರ ಹಾಗೂ ಡೀಸೆಲ್ ಪೆಟ್ರೋಲ್ ದರ ಇಳಿಸಬೇಕೆಂದು ಒತ್ತಾಯಿಸಿ ಮಂಗಳವಾರ  ಮೂಡಬಿದಿರೆ ಬ್ಲಾಕ್ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಿದೆ.
 
mood_congres_protst
ಮುಲ್ಕಿ-ಮೂಡಬಿದಿರೆ ಶಾಸಕ ಕೆ.ಅಭಯಚಂದ್ರ ಜೈನ್ ನೇತೃತ್ವದಲ್ಲಿ ಮೂಡಬಿದಿರೆ ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು. ತಹಶೀಲ್ದಾರ್ ಕಚೇರಿ ಮುಂದೆ ಸಭೆ ಸೇರಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೆ.ಅಭಯಚಂದ್ರ ಜೈನ್ ಕೇಂದ್ರ ಸರಕಾರ ಜನವಿರೋಧೀ ನೀತಿ ಅನುಸರಿಸುತ್ತಿದೆ. ಮೋದಿ ಸರಕಾರ ಅಚ್ಛೇದಿನ್ ಎಂದು ಭಾಷಣದಲ್ಲಿ ಹೇಳುತ್ತಿದ್ದಾರೆಯಾದರೂ ಬಡವರ ರಕ್ತ ಹಿಂಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
mood_congres_protst2
ಮೂಡಬಿದಿರೆ ವಿಶೇಷ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರ, ಪ್ರಧಾನ ಕಾರ್ಯದರ್ಶಿ ರತ್ನಾಕರ ಸಿ.ಮೊಯಿಲಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸುಪ್ರಿಯಾ ಡಿ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪದ್ಮಪ್ರಸಾದ್ ಜೈನ್, ಮೂಡಾ ಮೂಡಬಿದಿರೆ ಅಧ್ಯಕ್ಷ ಸುರೇಶ್ ಪ್ರಭು, ಮೂಡಬಿದಿರೆ ಪುರಸಭಾಧ್ಯಕ್ಷೆ ಹರಿಣಾಕ್ಷಿ, ಚಂದ್ರಹಾಸ್ ಸನಿಲ್ ಸೇರಿದಂತೆ ಇತರರಿದ್ದರು.

LEAVE A REPLY

Please enter your comment!
Please enter your name here