ಕೇರಳದಲ್ಲಿ ಮಳೆಯ ಮುನ್ಸೂಚನೆ

0
478


ಮಂಗಳೂರು: ಕೊಡಗು, ಸೋಮವಾರಪೇಟೆ, ಮೂಡಿಗೆರೆ, ಬಾಳೆಹೊನ್ನೂರು, ಆಗುಂಬೆ, ಶ್ರಿಂಗೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು, ಉಡುಪಿ, ಉತ್ತರ ಕನ್ನಡ, ಹಾವೇರಿ, ಗದಗ, ಧಾರವಾಡ, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು (0-5mm) ಮಳೆಯ ಮುನ್ಸೂಚೆನೆ ಇದೆ. ( ಕೆಲವು ಭಾಗಗಳಲ್ಲಿ ಉತ್ತಮ ಮಳೆ ಇರಬಹುದು. ಆದರೆ ಅಂತಹ ಮುನ್ಸೂಚೆನೆ ಇಲ್ಲ. ಎಲ್ಲವೂ ಗಾಳಿಯ ಮೇಲೆ ಅವಲಂಬಿಸಿದೆ). ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಕೇರಳದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.

LEAVE A REPLY

Please enter your comment!
Please enter your name here