ಕೈಗಾರಿಕಾ ಪ್ರದೇಶ: ರಸ್ತೆ ದುರಸ್ತಿಗೆ ಡಿ.ಸಿ. ಸೂಚನೆ

0
209

ಮ0ಗಳೂರು ಪ್ರತಿನಿಧಿ ವರದಿ
ಬೈಕಂಪಾಡಿ ಕೈಗಾರಿಕಾ ಪ್ರದೇಶದ ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸಿ ಅಭಿವೃದ್ಧಿಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ ಅವರು ಕೆ.ಐ.ಎ.ಡಿ.ಬಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
 
 
ಅವರು ಗುರುವಾರ ಶಾಸಕ ಬಿ.ಎ.ಮೊಹಿದೀನ್ ಬಾವಾ ಅವರ ಜತೆಗೆ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ರಸ್ತೆ ಪರಿಸ್ಥಿತಿ ವೀಕ್ಷಿಸಿದರು. ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆಯೇ ಸಂಪೂರ್ಣವಾಗಿ ಹದಗೆಟ್ಟು, ಸುಗಮ ಸಂಚಾರಕ್ಕೆ ಸಮಸ್ಯೆಯಾಗಿರುವುದನ್ನು ಕಂಡ ಜಿಲ್ಲಾಧಿಕಾರಿಗಳು, ಕೆ.ಐ.ಎ.ಡಿ.ಬಿ. ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.ಕೂಡಲೇ ದುರಸ್ತಿ ಕಾರ್ಯ ಕೈಗೆತ್ತಿ , ಶಾಶ್ವತ ಅಭಿವೃದ್ಧಿಗೆ ರಸ್ತೆ ಕಾಮಗಾರಿ ನಡೆಸಲು ಜಿಲ್ಲಾಧಿಕಾರಿಗಳು ಕೆ.ಐ.ಎ.ಡಿ.ಬಿ. ಅಭಿವೃದ್ಧಿ ಅಧಿಕಾರಿಗೆ ತಾಕೀತು ಮಾಡಿದರು.
 
 
ಶಾಸಕ ಬಿ.ಎ.ಮೊಹಿದೀನ್ ಬಾವಾ ಅವರು ಮಾತನಾಡಿ, ಮಂಗಳೂರಿನ ಪ್ರಮುಖ ಕೈಗಾರಿಕಾ ನೆಲೆಯಾಗಿರುವ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ರಸ್ತೆ ದುರಸ್ತಿಯನ್ನು ಆದ್ಯತೆಯಲ್ಲಿ ಕೈಗೆತ್ತಿಕೊಳ್ಳಬೇಕು. ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆಯ ಬದಿಗಳಲ್ಲಿ ಘನ ವಾಹನಗಳ ಪಾರ್ಕಿಂಗ್ ನಿಂದ ಸಾರ್ವಜನಿಕರಿಗೆ, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲು ಸೂಚಿಸಿದರು. .

LEAVE A REPLY

Please enter your comment!
Please enter your name here