ಕೊಡಗಿನಲ್ಲಿ ಬ್ಯಾಂಕ್ ಮುಷ್ಕರ ಯಶಸ್ವಿ

0
211

ಮಡಿಕೇರಿ ಪ್ರತಿನಿಧಿ ವರದಿ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬ್ಯಾಂಕ್ ಸಿಬ್ಬಂದಿಗಳು ಜಿಲ್ಲೆಯಾದ್ಯಂತ ಬ್ಯಾಂಕ್ ವಹಿವಾಟು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.
 
 
 
ಈ ಹಿಂದೆ ಬ್ಯಾಂಕ್ ಸಿಬ್ಬಂದಿಗಳ ನೌಕರರ ಒಕ್ಕೂಟ ಯುಎಫ್ ಬಿಯು ಮತ್ತು ಕೇಂದ್ರ ಸರ್ಕಾರದ ನಡುವೆ ಮಾತುಕತೆ ನಡೆದಿತ್ತು ಮತ್ತು ಕೇಂದ್ರ ಸರ್ಕಾರ ಕೂಡ ಬೇಡಿಕೆ ಈಡೇರಿಸುವುದಾಗಿ ಹೇಳಿತ್ತು. ಆದರೆ ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಬ್ಯಾಂಕ್ ಸಿಬ್ಬಂದಿಗಳು ಮುಷ್ಕರ ನಡೆಸಿದರು.
ಖಾಸಗಿ ಬ್ಯಾಂಕ್ ಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ಬ್ಯಾಂಕ್ ಗಳು ಕಾರ್ಯವನ್ನು ಸ್ಥಗಿತಗೊಳಿಸಿ ಮುಷ್ಕರಕ್ಕೆ ಬೆಂಬಲ ಸೂಚಿಸಿದವು.

LEAVE A REPLY

Please enter your comment!
Please enter your name here