ಕೊರೋನಾ ಹಿನ್ನಲೆಯಲ್ಲಿ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

0
345

ಪೆರಿಂಜೆ: ಕೊರೋನಾ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ ಎಂದು ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಬಿ.ಯಶೋವರ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಮಾರ್ಚ್ 24ರಂದು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಡ್ಡ್ಯಾರಬೆಟ್ಟ ಸಂತೃಪ್ತಿ ಸಭಾಭವನದಲ್ಲಿ ದಿನಪೂರ್ತಿ ಕಾರ್ಯಕ್ರಮ ನಡೆಸಲು ಸರ್ವ ಸಿದ್ಧತೆಗಳು ಮಾಡಲಾಗಿತ್ತು. ಮಾರಣಾಂತಿಕ ಕೊರೋನಾ ಭೀತಿಯ ಹಿನ್ನಲೆಯಲ್ಲಿ ಸರಕಾರದ ಆದೇಶದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಮ್ಮೇಳನವನ್ನು ಅನಿರ್ದಿಷ್ಟಾವಧಿ ಮುಂದೂಡಲಾಗಿದ್ದು ಸಮ್ಮೇಳನದ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here