ಕೋಟಿ ವೃಕ್ಷ ಅಭಿಯಾನ ಕಾರ್ಯಕ್ರಮ

0
387

 
ಮಂಗಳೂರು ಪ್ರತಿನಿಧಿ ವರದಿ
ಜುಲೈ 7 ರಂದು ಕೋಟಿ ವೃಕ್ಷ ಅಭಿಯಾನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಅಬಕಾರಿ ಇಲಾಖಾ ವತಿಯಿಂದ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ಮೇರಿಹಿಲ್ನಲ್ಲಿರುವ ಅಬಕಾರಿ ಇಲಾಖೆಯ ಕಛೇರಿಯ ಪರಿಸರದಲ್ಲಿ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು.
 
 
 
ಕಾರ್ಯಕ್ರಮವನ್ನು ಜಿಲ್ಲಾ ಅಬಕಾರಿ ಉಪ ಆಯುಕ್ತರಾದ ಎಲ್.ಎ. ಮಂಜುನಾಥ್ರವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಅಬಕಾರಿ ಇಲಾಖೆಯ ಉಪ ಅಧೀಕ್ಷಕರುಗಳಾದ ಶಿವಪ್ರಸಾದ್, ಚಂದ್ರಪ್ಪ, ಅಮರ್ ನಾಥ್ ಭಂಡಾರಿ ಹಾಗೂ ಅಬಕಾರಿ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು ಎಂದು ಡೆಪ್ಯುಟಿ ಕಮೀಷನರ್ ಆಫ್ ಎಕ್ಸೈಜ್ ಇವರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here