ಕ್ರಿಕೆಟ್ ಸಂಸ್ಥೆ ಅಧ್ಯಕ್ಷರಾಗಿ ಶ್ರೀನಿವಾಸನ್ ಆಯ್ಕೆ

0
328

 
ಸ್ಪೋರ್ಟ್ಸ್ ವರದಿ: ಲೇಖಾ
ಐಪಿಎಲ್ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ನಂತಹ ಸಾಕಷ್ಟು ವಿವಾದಕ್ಕೀಡಾಗಿದ್ದ ಎನ್.ಶ್ರೀನಿವಾಸನ್ ತಮಿಳುನಾಡು ಕ್ರಿಕೆಟ್ ಸಂಸ್ಥೆ (ಟಿಎನ್​ಸಿಎ)ಅಧ್ಯಕ್ಷ ಹುದ್ದೆಗೆ ಮತ್ತೊಮ್ಮೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
 
 
 
ಇಂದು ನಡೆದ ಚುನಾವಣೆಯಲ್ಲಿ ಯಾವುದೇ ಮತದಾನವಿಲ್ಲದೇ ಎನ್. ಶ್ರೀನಿವಾಸನ್ ಅವರನ್ನೇ ಮುಂದಿನ ಸೇವಾವಧಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಮಿಳುನಾಡು ಕ್ರಿಕೆಟ್ ಸಂಸ್ಥೆ ತಿಳಿಸಿದೆ.
 
 
 
ಮ್ಯಾಚ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆನ್ನುವ ಆರೋಪವಿರುವ ಹಿನ್ನೆಲೆಯಲ್ಲಿ ಶ್ರೀನಿವಾಸ್ ಮತ್ತೆ ಅಧಿಕಾರಕ್ಕೇರುವುದನ್ನು ತಪ್ಪಿಸಲು ವಿರುದ್ಧ ಬಣ ಮದ್ರಾಸ್ ಕೋರ್ಟ್ ಮೆಟ್ಟಿಲೇರಿತ್ತು. ಟಿಎನ್​ಸಿಎ ಚುನಾವಣೆಗೆ ತಡೆಕೋರಿ ಮದ್ರಾಸ್ ಕೋರ್ಟ್​ನಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಜೂನ್ ೨೪ರಂದು ನಡೆದಿದ್ದು, ನ್ಯಾಯಾಲಯ ಚುನಾವಣೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿತ್ತು.
ಈ ಹಿನ್ನಲೆಯಲ್ಲಿ ಇಂದು ಚುನಾವಣೆ ನಡೆದಿದ್ದು, ಎನ್.ಶ್ರೀನಿವಾಸನ್ ಅವಿರೋಧವಾಗಿ ಆಯ್ಕೆಯಾಗಿರುವುದು ಸ್ಪಷ್ಟವಾಗಿದೆ.

LEAVE A REPLY

Please enter your comment!
Please enter your name here