ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿರುವ ಪ್ರತಿಭಟನೆ ಕಾವು

0
299

NEWS UPDATE: ವಾರ್ತೆ.ಕಾಂ
ಕಾವೇರಿ ಹೋರಾಟ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಮಂಡ್ಯದಲ್ಲಿ ಜನಕಹಳೆ ಮೊಳಗುತ್ತಿದೆ. ಶ್ರೀರಂಗಪಟ್ಟಣ ಮತ್ತು ಬೆಂಗಳೂರು ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಮಂಡ್ಯದಲ್ಲಿ ಸಮಯ ಕಳೆದಂತೆ ಪ್ರತಿಭಟನೆ ಹೆಚ್ಚಾಗುತ್ತಿದೆ. ಮಕ್ಕಳಿಂದ ಹಿಡಿದು ಹಿರಿಯರ ತನಕ ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.
 
 
ರೈತರು, ಕನ್ನಡಪರ ಸಂಘಟನೆಗಳು ಮಂಡ್ಯದ ಹೊಳಲು ಸರ್ಕಲ್ ನಲ್ಲಿರುವ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿ ಬಂದ್ ಆಚರಿಸುತ್ತಿದ್ದಾರೆ. ಕೆಲವೆಡೆ ಅಂಗಡಿಗಳಲ್ಲಿರುವ ವಸ್ತುಗಳನ್ನು ರಸ್ತೆಗೆ ಎಸೆಯುತ್ತಿದ್ದು, ಅಂಗಡಿಗಳ ಮೇಲೆ ಕಲ್ಲುತೂರಾಟ ನಡೆಸುತ್ತಿದ್ದಾರೆ.
 
 
ಶ್ರೀರಂಗಪಟ್ಟಣದಲ್ಲಿ ರೈತರು, ಕನ್ನಡಪರ ಸಂಘಟನೆಗಳು ಕಾವೇರಿ ನೀರಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ನೀರಿನಲ್ಲೇ ನಿಂತು ತಿಂಡಿ-ತಿನಿಸು ತಿನ್ನುತ್ತಿದ್ದಾರೆ. ಇನ್ನೊಂದೆಡೆ ಮಕ್ಕಳ ರಾಜಕೀಯ ನಾಯಕರ  ಚಟ್ಟ ಕಟ್ಟಿ ಮೆರವಣಿಗೆ ಮಾಡುತ್ತಿದ್ದಾರೆ.
 
 
 
 
ಬಂದ್ ಗೆ ಖಾಸಗಿ ಶಾಲೆಗಳ ಬೆಂಬಲ
ಮಂಡ್ಯ ತಾಲೂಕಿನ ಇಂಡುವಾಳುನಲ್ಲಿ ವಿನೂತನ ಪ್ರತಿಭಟನೆ ನಡೆದಿದೆ. ತಮಿಳುನಾಡು ಸಿಎಂ ಜಯಲಲಿತಾ ತಿಥಿ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜಯಲಲಿತಾ ತಿಥಿಗೆ ಚಿಕನ್ ಬಿರಿಯಾನಿ ಮಾಡಿ ಧರಣಿ ನಡೆಸುತ್ತಿದ್ದಾರೆ. ರಸ್ತೆಯಲ್ಲಿ ಮರದ ದಿಮ್ಮಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಸೆ.9ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಕರ್ನಾಟಕ ಬಂದ್ ಗೆ ರಾಜ್ಯ ಖಾಸಗಿ ಶಾಲಾ ಮಂಡಳಿ ಬೆಂಬಲ ಸೂಚಿಸಿದೆ.
 
 
KRS ಜಲಾಶಯಕ್ಕೆ ಟೈಟ್ ಸೆಕ್ಯೂರಿಟಿ:
ಕೆಆರ್ ಎಸ್ ಜಲಾಶಯ ಸುತ್ತಮುತ್ತ 100ಕ್ಕೂ ಹೆಚ್ಚು ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದೆ. ಭಾರೀ ಭದ್ರತೆಗಾಗಿ ಜಲಾಶಯಕ್ಕೆ ಡಬಲ್ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ. 11 ಕೆಎಸ್ ಆರ್ ಪಿ ತುಕಡಿ, 2 ಜಿಲ್ಲಾ ಮೀಸಲು ಪಡೆ ತುಕಡಿ, ಒಂದು ಕ್ಷಿಪ್ರ ಕಾರ್ಯಾಚರಣೆ ಪಡೆ, ಇಬ್ಬರು ಎಎಸ್ ಪಿ, ಓರ್ವ ಡಿವೈಎಸ್ ಪಿ, 6 ಇನ್ಸ್ ಪೆಕ್ಟರ್, 6 ಸಬ್ ಇನ್ಸ್ ಪೆಕ್ಟರ್ ಗಳನ್ನು ನಿಯೋಜಿಸಲಾಗಿದೆ.

LEAVE A REPLY

Please enter your comment!
Please enter your name here