ಕ್ಷಣ ಗಣನೆ ಆರಂಭ… ಭಕ್ತಿಯ ಪರಾಕಾಷ್ಟೆಯಲ್ಲಿ ಭಕ್ತ ಸಮೂಹ

0
356
ಶಬರಿಮಲೆಯಲ್ಲಿ ಭಕ್ತ ಸಮೂಹ

ಶಬರಿಮಲೆಯಿಂದ ವಾರ್ತೆ LIVE
ಮಕರ ಜ್ಯೋತಿ ವೀಕ್ಷಣೆಗೆ ಕಾತರದ ಕಾಯುವಿಕೆ…
ಭವ್ಯ ಮಯ್ಯ (ವಾರ್ತೆ ಡೆಸ್ಕ್)
ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಕಾಣುವ ಮಕರಜ್ಯೋತಿಗೆ ಹೆಚ್ಚಿನ ಪ್ರಾಧಾನ್ಯತೆ ಇದೆ. ಅಯ್ಯಪ್ಪ ವೃತಾಧಾರಿಗಳಾದ ಜನರು ಶಬರಿಮಲೆಗೆ ತೆರಳಿ ಮಕರ ಜ್ಯೋತಿಯ  ದರ್ಶನವನ್ನು ಪಡೆದರೆ ಜನ್ಮ ಸಾರ್ಥಕವಾಗುವುದೆಂಬ ನಂಬಿಕೆಯಿಂದಾಗಿ ಲಕ್ಷೋಪಲಕ್ಷ ಜನರು ಈ ಜ್ಯೋತಿಯ ದರ್ಶನಕ್ಕಾಗಿ ವರ್ಷಂಪ್ರತಿ ಶಬರಿಮಲೆ ಸನ್ನಿಧಾನಕ್ಕಾಗಮಿಸುತ್ತಾರೆ. “ಮಕರ  ವಿಳಕ್ಕು”ಎಂದು ಕರೆಯಲ್ಪಡುವ ಈ ಜ್ಯೋತಿಯು ಶಬರಿಮಲೆಯ ಬೆಟ್ಟದಿಂದ ಮೂರು ಬಾರಿ ಗೋಚರವಾಗುತ್ತದೆ.
ಶಬರಿಮಲೆಯ ಎರಡು ತಿಂಗಳ ಪವಿತ್ರ ವ್ರತಾಚರಣೆಯ ಕೊನೆಯ ದಿನವಾದ ಮಕರ ಸಂಕ್ರಮಣದಂದು ‘ಮಕರ ಜ್ಯೋತಿ’ಯ ದರ್ಶನವಾಗುತ್ತದೆ. ಶಬರಿಮಲೆಗೆ ವಿರುದ್ಧ ದಿಕ್ಕಿನಲ್ಲಿರುವ ಪೊನ್ನಂಬಲಮೇಡು ಗಿರಿಯಲ್ಲಿ ಮಕರಜ್ಯೋತಿ ಕಾಣಿಸಿಕೊಳ್ಳುತ್ತದೆ. ಪ್ರತಿವರ್ಷ ಜನವರಿ 14ರಂದು ಅಯ್ಯಪ್ಪ ಸ್ವಾಮಿಗೆ ಸಂಜೆ 7 ಗಂಟೆಗೆ ನಡೆಯುವ ಮಹಾಮಂಗಳಾರತಿ ಬಳಿಕ ಮಕರ ಜ್ಯೋತಿಯ ದರ್ಶನವಾಗುತ್ತದೆ. ಮಕರಜ್ಯೋತಿಯು ಮೂರು ಬಾರಿ ದೇದೀಪ್ಯಮಾನವಾಗಿ ಗೋಚರಿಸಿ ಅದೃಶ್ಯವಾಗುತ್ತದೆ.
ಮಕರಜ್ಯೋತಿ ಕಾಣಿಸಿಕೊಳ್ಳುವ ಪೊನ್ನಂಬಲಮೇಡು ಗಿರಿಯು ದಟ್ಟ ಕಾಡಿನಿಂದ ಆವೃತವಾಗಿದೆ. ಈ ಗಿರಿಯು ಅರಣ್ಯ ಇಲಾಖೆ ಹಾಗೂ ವಿದ್ಯ್ಯುತ್ ಇಲಾಖೆಯ ಸುಪರ್ದಿಯಲ್ಲಿದೆ . ಸಾರ್ವಜನಿಕರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.

LEAVE A REPLY

Please enter your comment!
Please enter your name here