ಖಂಡನೀಯ

0
296

 
ಮಂಗಳೂರು ಪ್ರತಿನಿಧಿ ವರದಿ
ಆರ್ ಎಸ್ಎಸ್ ಮುಖಂಡ ರಾಮ್ ಮೋಹನ್ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವುದು ಖಂಡನೀಯ. ಪೊಲೀಸ್ ವೈಫಲ್ಯ ಹಾಗೂ ಕಾಂಗ್ರೆಸ್ ನಾಯಕರ ತುಷ್ಟೀಕರಣ ನೀತಿಯಿಂದಾಗಿ ಜಿಲ್ಲೆಯಲ್ಲಿ ಸಮಾಜ ಘಾತಕ ಕೃತ್ಯ ನಡೆಸುವವರಿಗೆ ಯಾವುದೇ ಭಯ ಇಲ್ಲದಂತಾಗಿದೆ. ನಿಷ್ಠಾವಂತ ಅಧಿಕಾರಿಗಳನ್ನು ರಾಜಕೀಯ ಪ್ರಭಾವ ಬೀರಿ ವರ್ಗಾವಣೆ ಮಾಡಲಾಗುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.
 
 
 
ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹಿಂದೂ ನಾಯಕರ ಕೊಲೆ , ಚೂರಿ ಇರಿತ, ಬೆಂಕಿ ಹಚ್ಚುವ ಪ್ರಕರಣಗಳು ನಿರಂತರ ನಡೆಯುತ್ತಿವೆ. ಜನತೆ ಪೊಲೀಸ್ ಇಲಾಖೆ ಮೇಲೆ ವಿಶ್ವಾಸ ಕಳಕೊಂಡಿದ್ದಾರೆ. ಹಿಂದೂಗಳು ಭಯದಿಂದ ಬದುಕುವ ಸ್ಥಿತಿ ನಿರ್ಮಾಣವಾಗಿದೆ. ಜನತೆಯ ಸಹನೆಗೂ ಮಿತಿ ಇದೆ. ಇಂತಹ ಘಟನೆಗಳು ಮರುಕಳಿಸಿದರೆ ಅದರ ವಿರುದ್ಧ ತೀವ್ರ ಹೋರಾಟ ಸಂಘಟಿಸುವ ಮೂಲಕ ಜನತೆಗೆ ರಕ್ಷಣೆ ನೀಡಲು ಬಿಜೆಪಿ ಬದ್ಧವಾಗಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here