ಗಡಿಯಲ್ಲಿ ಬಸ್ ಸಂಚಾರ ಸ್ಥಗಿತ

0
482

 
ರಾಷ್ಟ್ರೀಯ ಪ್ರತಿನಿಧಿ ವರದಿ
ಇಂದು ತಮಿಳುನಾಡು ಬಂದ್ ಹಿನ್ನೆಲೆಯಲ್ಲಿ ಕರ್ನಾಟಕ, ತಮಿಳುನಾಡಿನ ಗಡಿಭಾಗದಲ್ಲಿ ಬಿಗಿ ಭದ್ರತೆ ಮಾಡಲಾಗಿದೆ. ತಮಿಳುನಾಡಿಗೆ ರಾಜ್ಯದಿಂದ ಬಸ್ ಸಂಚಾರ ಸ್ಥಗಿತವಾಗಿದೆ. ಕರ್ನಾಟಕದ ಗಡಿಯಲ್ಲೇ ರಾಜ್ಯ ಬಸ್ ಗಳು ನಿಂತಿದೆ. ತಮಿಳುನಾಡಿನಿಂದಲೂ ಬಸ್ ಗಳು ಆಗಮಿಸಲಿಲ್ಲ. ಗಡಿಭಾಗದಲ್ಲಿ ಟೋಲ್ ಗೇಟ್ ಸಂಪೂರ್ಣ ಬಂದ್ ಮಾಡಲಾಗಿದೆ.
 
 
ಕಾವೇರಿ ವಿಚಾರವಾಗಿ ತಮಿಳುನಾಡಿನಲ್ಲಿ ಇಂದು ಬಂದ್ ಆಚರಣೆಯಲ್ಲಿದೆ. ಇದರಿಂದ ಗಡಿಭಾಗದಲ್ಲಿ ಬಸ್ ಗಳು ಇಲ್ಲದೆ ಜನರು ಪರದಾಡುತ್ತಿದ್ದಾರೆ. ಜನರು ಸುಮಾರು 4 ಕಿ.ಮೀ ನಡೆದುಕೊಂಡು ಹೋಗುತ್ತಿದ್ದಾರೆ. ಉಭಯ ರಾಜ್ಯಗಳ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ. ಅತ್ತಿಬೆಲೆ ಗೇಟ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
 
 
3 ಚೆಕ್ ಪೋಸ್ಟ್ ಬಂದ್:
ಚಾಮರಾಜನಗರ ಜಿಲ್ಲೆಯಲ್ಲಿ 3 ಚೆಕ್ ಪೋಸ್ಟ್ ನ್ನು ಬಂದ್ ಮಾಡಲಾಗಿದೆ. ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ತಾಲೂಕಿನ ಪುಣಜನೂರು ಚೆಕ್ ಪೋಸ್ಟ್, ಕೊಳ್ಳೇಗಾಲ ತಾಲೂಕಿನಲ್ಲಿರುವ ಪಾಲಾರ್ ಚೆಕ್ ಪೋಸ್ಟ್, ಗುಂಡ್ಲುಪೇಟೆ ತಾಲೂಕಿನ ಕೆಕ್ಕನಹಳ್ಳ ಚೆಕ್ ಪೋಸ್ಟ್ ನ್ನು ಬಂದ್ ಮಾಡಲಾಗಿದೆ. ಎರಡು ರಾಜ್ಯಗಳ ನಡುವೆ ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಚಾಮರಾಜನಗರ ಗಡಿಭಾಗದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

LEAVE A REPLY

Please enter your comment!
Please enter your name here