ನಮ್ಮ ಪ್ರತಿನಿಧಿ ವರದಿ
ದ್ವಿತೀಯ ಪಿಯುಸಿ ಪರೀಕ್ಷೆ ಈ ಬಾರಿ ಗೊಂದಲ ರಹಿತವಾಗಿ ನಡೆಯಬೇಕೆಂಬ ಹಿನ್ನಲೆಯಲ್ಲಿ ಸಾಕಷ್ಟು ವ್ಯವಸ್ಥೆಗಳು ನಡೆದಿವೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ, ಪರೀಕ್ಷಾ ಅವಧಿ ವರೆಗೆ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಿದೆ.ಈ ಬಾರಿ ಪರೀಕ್ಷೆಗಳು ಬೆಳಗ್ಗೆ 10.15ರಿಂದ ಪ್ರಾರಂಭಗೊಳ್ಳುವುದರಿಂದ ವಿದ್ಯಾರ್ಥಿಗಳು ಯಾವುದೇ ಗೊಂದಲ ಗಡಿಬಿಡಿಗಳಿಲ್ಲದೇ ಪರೀಕ್ಷೆ ಬರೆಯಬೇಕು ಎಂದು ಡಿಡಿಪಿಯು ಪ್ರಕಟನೆ ತಿಳಿಸಿದೆ.
ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ವಸ್ತುಗಳನ್ನು ಉತ್ತರ ಪತ್ರಿಕೆ ಹಾಗೂ ಇತರ ಲೇಖನ ಸಾಮಗ್ರಿಗಳನ್ನು ಈಗಾಗಲೇ ಒದಗಿಸಲಾಗಿದ್ದು, ಪರೀಕ್ಷೆಗಳು ಸೂಸುತ್ರವಾಗಿ ನಡೆಯಲು ಸಹಕಾರಿಯಾಗಿದೆ. ವಿದ್ಯಾರ್ಥಿಗಳಿಗೆ ಈಗಾಗಲೇ ಪ್ರವೇಶ ಪತ್ರ ನೀಡಲಾಗಿದ್ದು, ಅದರಲ್ಲಿ ಸಂಬಂಧಪಟ್ಟ ಪರೀಕ್ಷಾ ಕೇಂದ್ರ ಸೂಚಿಸಲಾಗಿದೆ. ವಿದ್ಯಾರ್ಥಿ ಮಾಹಿತಿ ಬೇಕಾದಲ್ಲಿ ಸಹಾಯವಾಣಿ ಸಂಖ್ಯೆ: 080-23083900ನ್ನು ಬೆಳಗ್ಗೆ 9ರಿಂದ ಸಂಜೆ 8ರ ವರೆಗೆ ಸಂಪರ್ಕಿಸ ಬಹುದು.ಎಲ್ಲ ಕಾಲೇಜುಗಳ 15 ಕಿ.ಮೀ. ವ್ಯಾಪ್ತಿಯೊಳಗಿನ ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಿರುವುದರಿಂದ ವಿದ್ಯಾರ್ಥಿಗಳಿಗೆ ಇದು ಅನುಕೂಲವಾಗಿದೆ.