ಗೋಹತ್ಯೆಗೆ ನಿಷೇಧಕ್ಕೆ ಸುಪ್ರೀಂ ನಕಾರ

0
282

ರಾಷ್ಟ್ರೀಯ ಪ್ರತಿನಿಧಿ ವರದಿ
ದೇಶದ ಪ್ರತೀ ರಾಜ್ಯದಲ್ಲೂ ಗೋಹತ್ಯೆಗೆ ನಿಷೇಧ ಹೇರಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾ ಮಾಡಿದೆ.
 
 
ಭಾರತದಲ್ಲಿರು ಕೆಲವು ರಾಜ್ಯಗಳಲ್ಲಿ ಮಾತ್ರ ಗೋಹತ್ಯೆಗೆ ನಿಷೇಧವಿದ್ದು, ಗೋಹತ್ಯೆ ನಿಷೇಧವಿರುವ ರಾಜ್ಯಗಳಿಂದ ಇತರ ರಾಜ್ಯಗಳಿಗೆ ಅಕ್ರಮವಾಗಿ ಗೋ ಸಾಗಾಣಿಕೆ ಮಾಡಲಾಗುತ್ತಿದೆ. ಹೀಗಾಗಿ ಇದನ್ನು ತಡೆಯಲು ಕಠಿಣ ಕಾನೂನು ರೂಪಿಸಬೇಕಿದ್ದು, ದೇಶದ ಎಲ್ಲಾ ರಾಜ್ಯಗಳಲ್ಲಿ ಗೋಹತ್ಯೆಗೆ ನಿಷೇಧ ಹೇರಬೇಕೆಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಈ ಹಿಂದೆ ಸಲ್ಲಿಸಲಾಗಿತ್ತು.
 
 
ಅರ್ಜಿ ಸಂಬಂಧ ಇಂದು ವಿಚಾರಣೆ ನಡೆಸಿರುವ ನ್ಯಾಯಾಲಯ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಗೋವು ಸಾಗಾಣಿಕೆ ಮತ್ತು ಅದಕ್ಕೆ ಸಂಬಂಧ ಪಟ್ಟಂತಹ ನಿಯಮಗಳನ್ನು ರೂಪಿಸುವಂತೆ ಈಗಾಗಲೇ ಎಲ್ಲಾ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದೆ ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here