ಗ್ಯಾಸ್ ಟ್ಯಾಂಕರ್ ಪಲ್ಟಿ: ಭೀತಿಯಲ್ಲಿ ಸ್ಥಳೀಯರು

0
415

 
ಬಂಟ್ವಾಳ ಪ್ರತಿನಿಧಿ ವರದಿ
ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸುರಿಕುಮೇರು ಗ್ರಾಮದ ಬಳಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದೆ.
 
 
ಎಚ್ ಪಿ ಕಂಪನಿಗೆ ಸೇರಿದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು, ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿದೆ. ಘಟನಾ ಸ್ಥಳಕ್ಕೆ 10 ಅಗ್ನಿ ಶಾಮಕ ದಳದ ವಾಹನಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಕಾರ್ಯಾಚರಣೆಯಲ್ಲಿ ತೊಡಗಿವೆ.
ಸದ್ಯ ಅಧಿಕಾರಿಗಳು ಗ್ಯಾಸ್ ಸೋರಿಕೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
 
 
ಬಂಟ್ವಾಳ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ. ಎಚ್ ಪಿ ಕಂಪನಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಟ್ಯಾಂಕರ್ ಪಲ್ಟಿಯಾದ ಸ್ಥಳದಿಂದ 3 ಕಿ.ಮೀ. ಸುತ್ತ-ಮುತ್ತ ವಾಹನ ಸಂಚಾರ ಮತ್ತು ಜನರ ಓಡಾಟವನ್ನು ನಿಷೇಧಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸೂರಿಕುಮೇರು ಗ್ರಾಮದ ಜನರನ್ನು ಸ್ಥಳಾಂತರ ಮಾಡಲಾಗಿದೆ.
ಏಪ್ರಿಲ್ 2ರಂದು ಉಪ್ಪಿನಂಗಡಿ ಸಮೀಪದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿತ್ತು. ಬಂಟ್ವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here