ಹೊಸಂಗಡಿ: ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ಈ ಬಾರಿ ಭಾರತೀಯ ಜನತಾ ಪಕ್ಷ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದು, ನೂತನ ಅಧ್ಯಕ್ಷರಾಗಿ ಕರುಣಾಕರ ಹಾಗೂ ಉಪಾಧ್ಯಕ್ಷರಾಗಿ ನಾಗರತ್ನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೊಸಂಗಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಫೆ.೧೦ರಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಈ ಆಯ್ಕೆ ನಡೆದಿದೆ. ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಶಿವಪ್ರಸಾದ್ ಅಜಿಲ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿದರು. ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರು, ಜಿಲ್ಲಾ ಪಂಚಾಯತ್ ಸದಸ್ಯ ಧರಣೇಂದ್ರ ಕುಮಾರ್ ಮೊದಲಾದವರಿದ್ದು ಶುಭ ಹಾರೈಸಿದರು.