ಚಂಡಮಾರುತ ಭೀತಿ

0
378

 
ಚೆನ್ನೈ ಪ್ರತಿನಿಧಿ ವರದಿ
ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಕುಮಭದ್ರೋಣ ಮಳೆಯಾಗುತ್ತಿದೆ. ಚೆನ್ನೈ, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ವರುಣನ ಅರ್ಭಟಕ್ಕೆ ತಗ್ಗುಪ್ರದೇಶಗಳು ಜಲಾವೃತವಾಗಿದೆ.
 
 
 
ಅಲ್ಲದೆ ಮುಂದಿನ 24 ಗಂಟೆಗಳಲ್ಲಿ ಚಂಡಮಾರುತ ಅಪ್ಪಳಿಸುವ ಭೀತಿ ಎದುರಾಗಿದೆ. ಚೆನ್ನೈ, ತಮಿಳುನಾಡಿನ ಹಲವೆಡೆ ಚಂಡಮಾರುತ ಬರುವ ಸಾಧ್ಯತೆ ಇದೆ. ಇದರಿಂದ ಮುನ್ನೆಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
 
 
ಚೆನ್ನೈನಲ್ಲಿ ಗಂಟೆಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಚಂಡಮಾರುತ ಭೀತಿ ಶುರುವಾಗಿದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
 
 
ಚೆನ್ನೈನಿಂದ ಆಂಧ್ರ ಕರಾವಳಿ ತೀರದೆಡೆಗೆ ಚಂಡಮಾರುತ ಸಾಗುತ್ತಿದ್ದು ಆಂಧ್ರದ ಕರಾವಳಿ ತೀರಗಳಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
 
ಎಡ ಬಿಡದೆ ಸುತ್ತಿರುವ ಮಳೆಯಿಂದಾಗಿ ಚೆನ್ನೈನಲ್ಲಿ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿದೆ ಇದರಿಂದಾಗಿ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ 56 ವಿಮಾನಗಳ ಹಾರಾಟದಲ್ಲಿ ಬದಲಾವಣೆಯಾಗಿದೆ.

LEAVE A REPLY

Please enter your comment!
Please enter your name here