ಜಮ್ಮುವಿನಲ್ಲಿ ಪಿಡಿಪಿ-ಬಿಜೆಪಿ ಮೈತ್ರಿ

0
173

 
ರಾಷ್ಟ್ರೀಯ ಪ್ರತಿನಿಧಿ ವರದಿ
ಕೊನೆಗೂ ಜಮ್ಮು ಮತ್ತು ಕಾಶ್ಮೀರದ ರಾಜಕೀಯ ಬಿಕ್ಕಟ್ಟಿಗೆ ಮುಕ್ತ ಸಿಕ್ಕಿದೆ. ರಾಜ್ಯದಲ್ಲಿ ಮತ್ತೆ ಪಿಡಿಪಿ-ಬಿಜೆಪಿ ಮೈತ್ರಿಕೂಟ ಸರ್ಕಾರ ರಚನೆಯಾಗುತ್ತಿದೆ. ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಕಣಿವೆ ರಾಜ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗುವುದು ಖಚಿತವಾಗಿದೆ.
 
mehbooba mufti
 
ಯಾವುದೇ ಹೊಸ ಷರತ್ತುಗಳಿಲ್ಲದೆ ಬಿಜೆಪಿಯೊಂದಿಗೆ ಸರ್ಕಾರ ರಚನೆಗೆ ಪಿಡಿಪಿ ನಿರ್ಧರಿಸಿದ್ದು, ಈ ಸಂಬಂಧ ಇಂದು ನಡೆದ ಪಿಡಿಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೆಹಬೂಬಾ ಮುಫ್ತಿ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ.
 
 
 
ಪಿಡಿಪಿ-ಬಿಜೆಪಿ ಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಮುಫ್ತಿ ಮೊಹಮ್ಮದ್ ಸಯೀದ್ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಜನವರಿಯಲ್ಲಿ ನಿಧನರಾದರು. ಬಳಿಕ ಬಿಜೆಪಿ ಮೈತ್ರಿಕೂಟದ ಒಪ್ಪಂದಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರದ ನೇತೃತ್ವ ವಹಿಸಿಕೊಳ್ಳಲು ಮೆಹಬೂಬಾ ಮುಫ್ತಿ ನಿರಾಕರಿಸಿದ್ದರು.

LEAVE A REPLY

Please enter your comment!
Please enter your name here