ದೇಶಪ್ರಮುಖ ಸುದ್ದಿವಾರ್ತೆ

ಜಯ ಆರೋಗ್ಯದಲ್ಲಿ ಕೊಂಚ ಚೇತರಿಕೆ

ಚೆನ್ನೈ ಪ್ರತಿನಿಧಿ ವರದಿ
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡಿಬಂದಿದೆ. ಅಪೋಲೋ ವೈದ್ಯರ ತಂಡ ಜಯಲಲಿತಾ ಅವರು ಆ್ಯಂಜಿಯೋಗ್ರಾಮ್ ನಡೆಸಿದ್ದಾರೆ. ಇಂದು ಮುಂಜಾನೆ ವೈದ್ಯರು ಆ್ಯಂಜಿಯೋಗ್ರಾಮ್ ನಡೆಸಿದ್ದಾರೆ.
 
 
ವೈದ್ಯರು ನಿರಂತರವಾಗಿ ನಿಗಾ ಘಟಕದಲ್ಲಿ ಇಟ್ಟಿದ್ದಾರೆ. ಬೆಳಗ್ಗೆ 10 ಗಂಟೆಗೆ ನವದೆಹಲಿಯ ಏಮ್ಸ್ ವೈದ್ಯರು ಆಗಮಿಸಲಿದ್ದಾರೆ.
ಕಳೆದ ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಡಿ.4 ರಂದು ಸಂಜೆ ವೇಳೆಗೆ ಹೃದಯಾಘಾತ ಸಂಭವಿಸಿದೆ. ಒಂದೆರಡು ತಿಂಗಳಿಂದ ಜಯಲಲಿತಾ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗಷ್ಟೇ ಚೇತರಿಸಿಕೊಳ್ಳುತ್ತಿದ್ದ ಜಯಲಲಿತಾ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ಅಪೋಲೋ ಆಸ್ಪತ್ರೆಯ ಪ್ರಕಟಣೆ ಮೂಲಕ ತಿಳಿದುಬಂದಿದೆ.
 
 
ಕರ್ನಾಟಕ-ತಮಿಳುನಾಡು ಗಡಿ ಭಾಗದಲ್ಲಿ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ. ಚಾಮರಾಜನಗರದ 3 ಚೆಕ್ ಪೋಸ್ಟ್ ಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ, ತಾಲೂಕಿನ ಪುಣಜನೂರು ಚೆಕ್ ಪೋಸ್ಟ್ ಗಳಲ್ಲಿ ಬಂದೀಬಸ್ತ್ ಮಾಡಲಾಗಿದೆ.
 
 
 
ಬೆಂಗಳೂರಿನ ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆ ಟೋಲ್ ಗೇಟ್ ನಲ್ಲಿ ಕೂಡ ಪೊಲೀಸ್ ಭದ್ರತೆ ಮಾಡಲಾಗಿದೆ. ಅತ್ತಿಬೆಲೆ ಸಮೀಪ 50ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ಭದ್ರತೆ ಮಾಡಲಾಗಿದೆ. ತಮಿಳುನಾಡು ಪೊಲೀಸರಿಂದಲೂ ಗಡಿ ಭಾಗದಲ್ಲಿ ಭದ್ರತೆ ಮಾಡಿದ್ದಾರೆ. ತಮಿಳುನಾಡಿನ ರಾಜ್ಯ ಸಾರಿಗೆ ಬಸ್ ಗಳ ಸಂಚಾರ ಯಥಾಸ್ಥಿತಿ ಮುಂದುವರಿದಿದೆ. ತಮಿಳುನಾಡಿಗೆ ತೆರಳುತ್ತಿರುವ ವಾಹನಗಳ ಸಂಖ್ಯೆ ವಿರಳವಾಗಿದೆ.
 
ಸರ್ಕಾರಿ ಶಾಲಾ-ಕಾಲೇಜು ಎಂದಿನಂತೆ ಕಾರ್ಯನಿರ್ವಹಣೆ
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾಗೆ ಹೃದಯಾಘಾತ ಹಿನ್ನೆಲೆಯಲ್ಲಿ ಚೆನ್ನೈನ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ. ಆದರೆ ಸರ್ಕಾರಿ ಶಾಲಾ ಕಾಲೇಜು ಎಂದಿನಂತೆ ಕಾರ್ಯನಿರ್ವಹಣೆ ನಡೆಯಲಿದೆ.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.

Comment here