ಜಿಟಿಟಿಸಿ ತರಬೇತಿಗಾಗಿ ಅರ್ಜಿ ಆಹ್ವಾನ

0
185

 
ಬೆಂಗಳೂರು ಪ್ರತಿನಿಧಿ ವರದಿ
ಬೆಂಗಳೂರು ನಗರದ ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್‍ನಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ಎಸ್.ಎಸ್.ಎಲ್.ಸಿ. ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ನಾಲ್ಕು ವರ್ಷಗಳ ಅವಧಿಯ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನುಪ್ಯಾಕ್ಚರಿಂಗ್, ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್, ಸರ್ಟಿಫಿಕೇಟ್ ಡಿಪ್ಲೋಮಾ ಇನ್ ಟೂಲ್ ಮ್ಯಾನುಪ್ಯಾಕ್ಚರಿಂಗ್, ಸರ್ಟಿಫಿಕೇಟ್ ಡಿಪ್ಲೋಮಾ ಇನ್ ಕಂಪ್ಯೂಟರ್ ಇಂಟಿಗ್ರೇಟೆಡ್ ಮ್ಯಾನುಪ್ಯಾಕ್ಚರಿಂಗ್, ಸರ್ಟಿಫಿಕೇಟ್ ಡಿಪ್ಲೋಮಾ ಇನ್ ಇಂಡಸ್ಟ್ರೀಯಲ್ ಎಲೆಕ್ಟ್ರಾನಿಕ್ಸ್ ಮತ್ತು ಹೆಣ್ಣು ಮಕ್ಕಳಿಗಾಗಿ ಡಿಪ್ಲೋಮಾ ಇನ್ ಎಲೆಕ್ಟ್ರಾನಿಕ್ಸ್ ಕೋರ್ಸ್‍ಗಳ ಪ್ರವೇಶಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
 
 
 
ಇದಲ್ಲದೆ ITI DIPLOMA BE (ಮ್ಯೆಕಾನಿಕಲ್ ಕ್ಷೇತ್ರದಲ್ಲಿ) ಪಾಸಾಗಿರುವ ಅಭ್ಯರ್ಥಿಗಳಿಗೆ ಉದ್ಯೋಗ ನಿಮಿತ್ತ ಅಲ್ಪಾವಧಿ ತರಬೇತಿಗಳನ್ನು ನಡೆಸಲಾಗುತ್ತಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಜಿಟಿಟಿಸಿಯ ಕಾಲೇಜಿನಲ್ಲಿ ಅರ್ಜಿಯನ್ನು ಪಡೆದು, ಭರ್ತಿಮಾಡಿದ ಅರ್ಜಿಯನ್ನು ಸಲ್ಲಿಸಲು ಜೂನ್ 7 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ 9141629585/9141629580 ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here