ಜಿಲ್ಲೆಗೆ 1 ಕೋಟಿ ಬಿಡುಗಡೆ

0
473

ಉಡುಪಿ ಪ್ರತಿನಿಧಿ ವರದಿ
ರಾಜ್ಯದ ಕೆಲವು ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಎದುರಿಸುತ್ತಿದ್ದು, ಕುಡಿಯುವ ನೀರಿನ ಅಭಾವ ಮತ್ತು ಮೇವಿನ ಕೊರತೆ ಉಲ್ಬಣಗೊಂಡು ಜನ ಜನುವಾರುಗಳು ಸಾಕಷ್ಟು ಸಂಕಷ್ಟದಲ್ಲಿರುವ ಹಿನ್ನಲೆಯಲ್ಲಿ, ಉಡುಪಿ ಜಿಲ್ಲೆಗೆ ಕುಡಿಯುವ ನೀರನ್ನು ಜನ ಜನುವಾರುಗಳಿಗೆ ಟ್ಯಾಂಕರ್ ಮೂಲಕ ಸರಬರಾಜು ಮಾಡಲು ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ ರೂ.100 ಲಕ್ಷ ಗಳನ್ನು ಸರಕಾರ ಬಿಡುಗಡೆ ಮಾಡಿರುತ್ತದೆ.
 
 
ಈಗಾಗಲೇ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿಲ್ಲಾ ಪಂಚಾಯತ್ ಉಡುಪಿ ಇವರಿಗೆ ಮುಂಜಾಗ್ರತಾ ಕ್ರಮವಾಗಿ ತುರ್ತು ಪರಿಸ್ಥಿತಿ ನಿಭಾಯಿಸಲು ರೂ.25 ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗಿದೆ, ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡುವ ಬಗ್ಗೆ ನೀಡಲಾದ ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ತಹಸೀಲ್ದಾರ್ ಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾದಿಕಾರಿ ಡಾ. ವಿಶಾಲ್ ಆರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here