ಜೀತಪದ್ಧತಿ: ಸಮೀಕ್ಷೆಗೆ ಡಿಸಿ ಸೂಚನೆ

0
478

 
ಮ0ಗಳೂರು ಪ್ರತಿನಿಧಿ ವರದಿ
ಜೀತಪದ್ಧತಿ ನಿರ್ಮೂಲನೆ ಕಾಯಿದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಜಿಲ್ಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸೂಚಿಸಿದ್ದಾರೆ.
ಅವರು ಗುರುವಾರ ತಮ್ಮ ಕಚೇರಿಯಲ್ಲಿ ನಡೆದ ಜೀತಪದ್ಧತಿ ನಿರ್ಮೂಲನೆ ಜಿಲ್ಲಾ ಮಟ್ಟದ ಜಾಗೃತ ಸಮಿತಿ ಸಭೆಯಲ್ಲಿ ಮಾತನಾಡಿದರು.
 
 
ಜೀತಗಾರಿಕೆ ಪದ್ಧತೆ ನಿರ್ಮೂಲನೆ ಕಾಯಿದೆ ಅಡಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟದ ಸಮಿತಿ ಹಾಗೂ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮಂಗಳೂರು ಹಾಗೂ ಪುತ್ತೂರು ಉಪವಿಭಾಗಮಟ್ಟದ ಸಮಿತಿ ರಚಿಸಲಾಗಿದೆ. ಸರಕಾರೇತರ ಸಂಘ ಸಂಸ್ಥೆಗಳಿಗೆ ಹಾಗೂ ಸಮಾಜಸೇವಕರಿಗೆ ಈ ಕಾಯಿದೆಯ ಬಗ್ಗೆ ಜಾಗೃತಿ ಮೂಡಿಸಲು ತರಬೇತಿಯನ್ನು ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಕಾರ್ಮಿಕ ಇಲಾಖೆಗೆ ಸೂಚಿಸಿದರು. ಜೀತಪದ್ಧತಿಯಲ್ಲಿರುವವರನ್ನು ಪತ್ತೆಹಚ್ಚಿ, ಅವರಿಗೆ ಸೂಕ್ತ ಪುನರ್ವಸತಿ ಹಾಗೂ ಪರಿಹಾರ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲು ಅವರು ತಿಳಿಸಿದರು.
 
ಜೀತಪದ್ಧತಿಯು ಅಮಾನವೀಯವಾಗಿದ್ದು, ಇದನ್ನು ತಡೆಯಲು ಎಲ್ಲರೂ ಸಹಕಾರ ನೀಡಬೇಕು. ಜೀತಗಾರಿಕೆ ಬಗ್ಗೆ ಎಲ್ಲಾ ಸಂಬಂಧಪಟ್ಟವರಿಗೂ ಕಾಯಿದೆಯ ಬಗ್ಗೆ ಸೂಕ್ತ ಮಾಹಿತಿ ನೀಡಬೇಕು. ಜೀತಪದ್ಧತಿಯಲ್ಲಿ ತೊಡಗಿಕೊಂಡಿದ್ದ ಫಲಾನುಭವಿಗಳಿಗೆ ರೂ. 1ಲಕ್ಷದವರೆಗೆ ಪುನರ್ವಸತಿ ಪ್ಯಾಕೇಜ್ ನೀಡಲು ಕಾಯಿದೆಯಲ್ಲಿ ಅವಕಾಶವಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
 
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವೇದಮೂರ್ತಿ, ಮಂಗಳೂರು ಸಹಾಯಕ ಆಯುಕ್ತ ಡಾ. ಅಶೋಕ್ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here