ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವ

0
272

ಮಡಿಕೇರಿ ಪ್ರತಿನಿಧಿ ವರದಿ
ಕೊಡಗು ಜಿಲ್ಲೆಯ ಐತಿಹಾಸಿಕ ಪುಣ್ಯಕ್ಷೇತ್ರ ತಲಕಾವೇರಿಯಲ್ಲಿ ತೀರ್ಥೋದ್ಭವ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 6.29ಕ್ಕೆ ಶುಭ ತುಲಾ ಲಗ್ನದಲ್ಲಿ ತೀರ್ಥೋದ್ಭವವಾಗಿದೆ.
 
 
 
ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆದ ತೀರ್ಥೋದ್ಭವದಲ್ಲಿ ತೀರ್ಥಸ್ವರೂಪಿಣಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಬ್ರಹ್ಮ ಕುಂಡಿಕೆಯಿಂದ ಪವಿತ್ರ ತೀರ್ಥ ಉಕ್ಕಿ ಹರಿದಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಭಕ್ತರು ಪುಣ್ಯ ಸ್ನಾನ ಮಾಡಿದ್ದಾರೆ.
 
ಈ ಸಂದರ್ಭದಲ್ಲಿ ಜಿಲ್ಲಾಡಳಿತದಿಂದ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.  ಭದ್ರತೆಗಾಗಿ 35 ಸಿಸಿ ಕ್ಯಾಮರಾ, 500 ಪೊಲೀಸ್ ಸಿಬ್ಬಂದಿ, 15 ಪೊಲಿಸ್ ಇನ್ಸ್ ಪೆಕ್ಟರ್ಸ್, 25 ಎಸ್ ಐಗಳ ನಿಯೋಜನೆ ಮಾಡಲಾಗಿದೆ. ಹೊರ ಜಿಲ್ಲೆಗಳ ಪೊಲೀಸ್ ಸಿಬ್ಬಂದಿಯೀ ಸಹ ನಿಯೋಜನೆ ಮಾಡಲಾಗಿತ್ತು. ಕೊಡಗು ಎಸ್ ಪಿ ರಾಜೇಂದ್ರ ಪ್ರಸಾದ್ ನೇತೃತ್ವದಲ್ಲಿ ಭದ್ರತೆ ಮಾಡಲಾಗಿತ್ತು.
 
 
 
1ತಿಂಗಳ ಕಾಲ ಕೊಡಗು ಏಕೀಕರಣ ರಂಗದಿಂದ ತಲಕಾವೇರಿಯಲ್ಲಿ ನಿರಂತರವಾಗಿ ಭಕ್ತರಿಗೆ ಅನ್ನದಾನ ನಡೆಯಲಿದೆ. ತಲಕಾವೇರಿಗೆ ಬರಲು ವಿವಿಧೆಡೆಯಿಂದ ಬಸ್ ಗಳ ಸೌಲಭ್ಯ ಮಾಡಲಾಗಿತ್ತು. ವಿರಾಜಪೇಟೆ, ಮಡಿಕೇರಿ, ಗೋಣಿಕೊಪ್ಪ, ಭಾಗಮಂಡಲ ಸೇರಿದಂತೆ ವಿವಿಧೆಡೆಯಿಂದ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿತ್ತು. ಭಾಗಮಂಡಲದಿಂದ ತಲಕಾವೇರಿವರೆಗೆ ದೀಪಾಲಂಕಾರ ಮಾಡಲಾಗಿತ್ತು. 8 ಕಿ.ಮೀ.ವಿಶೇಷ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.
 
 

LEAVE A REPLY

Please enter your comment!
Please enter your name here