ಪ್ರಮುಖ ಸುದ್ದಿವಾರ್ತೆವಿದೇಶ

ಟ್ಯಾಂಕರ್ ಸ್ಫೋಟ: 70ಕ್ಕೂ ಹೆಚ್ಚು ಸಾವು

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ಟ್ಯಾಂಕರ್ ವೊಂದು ಸ್ಫೋಟಗೊಂಡ ಪರಿಣಾಮ ಸ್ಥಳದಲ್ಲೇ 70ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದ ಘಟನೆ  ದಕ್ಷಿಣ ಆಫ್ರಿಕಾದ ಮೊಜಾಂಬಿಕನ್ ನಲ್ಲಿ ಶುಕ್ರವಾದ ನಡೆದಿದೆ.
 
 
 
ಪೆಟ್ರೋಲ್ ನೀಡುವ ಸಲುವಾಗಿ ರಸ್ತೆ ಬದಿಯಲ್ಲಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ನಿಂತಿತ್ತು. ಆಗ ಸ್ಥಳದಲ್ಲಿ ಪೆಟ್ರೋಲ್ ತೆಗೆದುಕೊಳ್ಳಲು ಸಾಕಷ್ಟು ಜನರು ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಟ್ಯಾಂಕರ್ ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಸ್ಥಳದಲ್ಲಿಯೇ 70ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರೆ, 100ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿದ್ದಾರೆ.
 
 
 
ಈಗಾಗಲೇ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.
Latest Posts

Comment here