ಡಿ.29 ಕುವೆಂಪು ಜಯಂತಿ ಆಚರಣೆ

0
714

ಬೆಂಗಳೂರು ಪ್ರತಿನಿಧಿ ವರದಿ
ಈ ವರ್ಷದಿಂದ ಕವಿ ಕುವೆಂಪು ಅವರ ಜನ್ಮ ದಿನಾಚರಣೆಯನ್ನು ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲು ಡಿಸೆಂಬರ್ 29ರಂದು ವಿಶ್ವಮಾನವ ದಿನವನ್ನಾಗಿ ಆಚರಿಸಲಿದೆ. ಎಲ್ಲಾ ಸಾಹಿತಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು ಎಂದು ಮೈಸೂರು ಜಿಲ್ಲೆ ಸಹಾಯಕ ಆಯುಕ್ತ ಸಿಎಲ್ ಆನಂದ್ ತಿಳಿಸಿದ್ದಾರೆ.
 
 
 
ಇದೇ 29ರಂದು ಮೈಸೂರಿನ ಕಲಾಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಕುವೆಂಪುರವರ ವಿಶ್ವ ಮಾನವ ಸಂದೇಶದ ಬಗ್ಗೆ ಮಾತನಾಡಲು ಪ್ರಮುಖ ಸಾಹಿತಿಯೊಬ್ಬರನ್ನು ಆಹ್ವಾನಿಸಲಾಗುವುದು. ಉಳಿದ ಎಲ್ಲಾ ಜಯಂತಿಗಳಂತೆ ಕುವೆಂಪು ಜಯಂತಿ ಕಾರ್ಯಕ್ರಮದಲ್ಲಿ ಕೂಡ ಎಲ್ಲಾ ಸರ್ಕಾರಿ ನೌಕರರು ಭಾಗವಹಿಸಬೇಕು ಎಂದರು.

LEAVE A REPLY

Please enter your comment!
Please enter your name here