ತಡವಾಗಿ ಪ್ರವೇಶಿಸಲಿರುವ ಮಾನ್ಸೂನ್

0
597

 
ಬೆಂಗಳೂರು ಪ್ರತಿನಿಧಿ ವರದಿ
ಬೆಂಗಳೂರಿನಲ್ಲಿ ಎರಡು ದಿನ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದೆ. ಇನ್ನೆರಡು ದಿನ ಕಾಲ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.
 
 
 
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. 24 ಗಂಟೆಗಳಲ್ಲಿ ಈಶಾನ್ಯ ಭಾಗ, ಆಂಧ್ರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ ಈಶಾನ್ಯ ಭಾಗಗಳಲ್ಲಿ ಚಂಡಮಾರುತ ಹೆಚ್ಚಾಗುವ ಸಾಧ್ಯತೆ ಇದೆ.
 
 
 
ಕರ್ನಾಟಕ ರಾಜ್ಯದ ಒಳನಾಡು, ಉತ್ತರಭಾಗಗಳಲ್ಲಿ ಮೋಡ ಮುಸುಕಿದ ವಾತಾವರಣವಿದೆ. ಈ ಬಾರಿ ಮಾನ್ಸೂನ್ ಪ್ರವೇಶ ತಡವಾಗಿದ್ದು, ಜೂನ್. 7ಕ್ಕೆ ಮನ್ಸೂನ್ ಕೇರಳಕ್ಕೆ ಪ್ರವೇಶಿಸಲಿದೆ.ಜೂನ್ 10ಕ್ಕೆ ಮಾನ್ಸೂನ್ ಬೆಂಗಳೂರಿಗೆ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here