ಬೆಂಗಳೂರು ಪ್ರತಿನಿಧಿ ವರದಿ
ಬೆಂಗಳೂರಿನ ಕೆಂಪೇಗೌಡ ವಿಮಾನನಿಲ್ದಾಣದಲ್ಲಿ ಭಾರಿ ದುರತವೊಂದು ತಪ್ಪಿದೆ. ಜೆಟ್ ಏರ್ ವೇಯ್ಸ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ.
ಮಂಗಳೂರಿಗೆ ಹೊರಟಿದ್ದ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡಿದೆ. ವಿಮಾನ ಟೇಕ್ ಆಫ್ ಆದ ನಂತರ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡಿದೆ. ನಂತರ ಸಮಸ್ಯೆ ಅರಿತ ಪೈಲಟ್ ವಿಮಾನವನ್ನು ಸುರಕ್ಷಿತವಾಗಿ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಮಾಡಿದ್ದಾರೆ.
9w2839 ನಂಬರಿನ ವಿಮಾನದ ಕ್ಯಾಬಿನ್ ನೊಳಗೆ ಹೊಗೆ ಕಾಣಿಸಿಕೊಂಡಿದೆ. ಇದರಿಂದ ವಿಮಾನ ಟೇಕ್ ಆಫ್ ಆದ ಕೆಲ ಹೊತ್ತಿನಲ್ಲೇ ಮತ್ತೆ ಲ್ಯಾಂಡಿಂಗ್ ಆಗಿದೆ. ವಿಮಾನದಲ್ಲಿ 4 ಸಿಬ್ಬಂದಿಗಳು ಸೇರಿ 65 ಪ್ರಯಾಣಿಕರಿದ್ದರು. ಪೈಲೆಟ್ ನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಮಾನದಲ್ಲಿ 4 ಸಿಬ್ಬಂದಿಗಳು ಸೇರಿ 65 ಪ್ರಯಾಣಿಕರಿದ್ದರು. ಪೈಲೆಟ್ ನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.