ತಮಿಳಿಗೆ ನೀರು ಬಿಡದಿರಲು ಸರ್ವಪಕ್ಷ ತೀರ್ಮಾನ

0
537

ಬೆಂಗಳೂರು ಪ್ರತಿನಿಧಿ ವರದಿ
ಕಾವೇರಿ ಜಲಾಯನ ಪ್ರದೇಶದಲ್ಲಿ ಮಳೆ ಕೊರತೆಯಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿಯನ್ನು ಸುಪ್ರೀಂ ಕೋರ್ಟ್‌ಗೆ ಮನದಟ್ಟು ಮಾಡಿಕೊಡುವುದು ಹಾಗೂ ತಮಿಳುನಾಡಿಗೆ ಸದ್ಯದ ಪರಿಸ್ಥಿತಿಯಲ್ಲಿ ನೀರು ಬಿಡದಿರಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸರ್ವ ಪಕ್ಷ ಸಭೆಯಲ್ಲಿ ತೀರ್ಮಾನಿಸಲಾಗಿದೆ.
 
ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವ ಪಕ್ಷಸಭೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯಿತು. ಮಳೆ ಕೈಕೊಟ್ಟ ಕಾರಣ ಕಾವೇರಿ ಕಣಿವೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿದೆ. ವಸ್ತುಸ್ಥಿತಿ ಹೀಗಿರುವಾಗ ತಮಿಳುನಾಡಿಗೆ ನೀರಾವರಿಗಾಗಿ ನೀರು ಹರಿಸಲು ಸಾಧ್ಯವಿಲ್ಲ ಎಂಬ ರಾಜ್ಯದ ನಿಲುವಿಗೆ ಎಲ್ಲಾ ಪಕ್ಷಗಳ ಮುಖಂಡರು ಬೆಂಬಲ ವ್ಯಕ್ತಪಡಿಸಿ ಜೊತೆಗೆ ವಾಸ್ತವ ಸ್ಥಿತಿಯನ್ನು ನ್ಯಾಯಾಲಯಕ್ಕೆ ಮನದಟ್ಟು ಮಾಡುವ ತೀರ್ಮಾನಕ್ಕೆ ಸಭೆ ಬಂದಿತು.
 
 
 
ಸೆಪ್ಟೆಂಬರ್ 2 ರಂದು ಸುಪ್ರೀಂ ಕೋರ್ಟಿನಲ್ಲಿ ತಮಿಳುನಾಡಿನ ಅರ್ಜಿಯ ವಿಚಾರಣೆ ನಡೆಯಲಿದ್ದು, ರಾಜ್ಯದ ಪರಿಸ್ಥಿತಿಯನ್ನು ಸಮರ್ಥವಾಗಿ ಮನವರಿಕೆ ಮಾಡಿಕೊಡಲು ಎಲ್ಲಾ ಅಗತ್ಯ ಮಾಹಿತಿಗಳನ್ನು ರಾಜ್ಯದ ಪರ ವಕೀಲರಿಗೆ ಒದಗಿಸಿ ನ್ಯಾಯಾಲಯದ ಮೂಲಕವೇ ಈ ಸಂಕಷ್ಟಗಳಿಗೆ ಪರಿಹಾರ ಹುಡುಕಿಕೊಳ್ಳಬೇಕು ಎಂಬ ತೀರ್ಮಾನವನ್ನು ಕೈಗೊಳ್ಳಲಾಯಿತು.
 
 
 
ಸಭೆಯಲ್ಲಿ ಮಾಜಿ ಸಿಎಂಗಳಾದ ಡಿ.ವಿ ಸದಾನಂದ ಗೌಡ, ಹೆಚ್ ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಈಶ್ವರಪ್ಪ, ಮಾಜಿ ಡಿಸಿಎಂ ಆರ್ ಆಶೋಕ್, ಮಾಜಿ ಸಚಿವ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಕೇಂದ್ರ ಸಚಿವರು, ಕಾವೇರಿ ಜಲಾಯನ ಪ್ರದೇಶಗಳ ಜಿಲ್ಲಾ ಉಸ್ತುವಾರಿ ಸಚಿವರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

LEAVE A REPLY

Please enter your comment!
Please enter your name here