ತಲಾ ಇಬ್ಬರು ಉಗ್ರರ ಹತ್ಯೆ-ಬಂಧನ

0
332

 
ವರದಿ: ಲೇಖಾ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಸಂಭವಿಸಿದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರಗಾಮಿಗಳನ್ನು ಹತ್ಯೆಗೈಯ್ಯಲಾಗಿದೆ. ಪುಲ್ವಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರಗಾಮಿಗಳನ್ನು ಗುಂಡಿಟ್ಟು ಹತ್ಯೆಗೈದಿದೆ.
 
 
 
 
ಇದೇ ವೆಳೆ ಸೊಪೋರ್​ನಲ್ಲಿ ನಿಷೇಧಿತ ಉಗ್ರಗಾಮಿ ಸಂಘಟನೆಗೆ ಸೇರಿದ ಹಿಜ್ಬುಲ್ ಮುಜಾಹಿದೀನ್​ನ ಇಬ್ಬರು ಉಗ್ರಗಾಮಿಗಳನ್ನು ಬಂಧಿಸಲಾಗಿದೆ. ಸೊಪೋರ್​ನಲ್ಲಿ ನಿಷೇಧಿತ ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದೀನ್​ ನ ಕುಖ್ಯಾತ ಕಮಾಂಡರ್ ಒಬ್ಬನ ಇಬ್ಬರು ನಿಕಟವರ್ತಿಗಳನ್ನು ವಿಶೇಷ ಕಾರ್ಯಾಚರಣೆ ಪಡೆ (ಒಎಸ್​ಜಿ) ಮತ್ತು ಸೇನೆಯ 52 ರಾಷ್ಟ್ರೀಯ ರೈಫಲ್ಸ್ ತುಕಡಿ ಯೋಧರು ಸೆರೆಹಿಡಿದಿದ್ದಾರೆ.
 
 
 
ಅಮರಗಡ ಪ್ರದೇಶದಲ್ಲಿ ರಾಷ್ಟ್ರೀಯ ರೈಫಲ್ಸ್ ಮತ್ತು ಎಸ್​ಓಜಿ ನಡೆಸಿದ ಜಂಟಿ ದಾಳಿಯಲ್ಲಿ ಶೌಕತ್ ಅಹ್ಮದ್ ಭಟ್ ಮತ್ತು ತನ್ವೀರ್ ಅಹ್ಮದ್ ಎಂಬುವರನ್ನು ಬಂಧಿಸಿ ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು, ಭೂಸ್ಪೋಟಕಗಳು, ಗ್ರೆನೇಡ್​ಗಳನ್ನು ವಶಪಡಿಸಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here