ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

0
225

ವರದಿ: ಸುನೀಲ್ ಬೇಕಲ್
ಧರ್ಮಸ್ಥಳದಲ್ಲಿ ಅಗಸ್ಟ್22ರಂದು ಉಜಿರೆಯ ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಶ್ರೀ. ಧ.ಮಂ.ಆಂಗ್ಲಮಾಧ್ಯಮ ಶಾಲೆ, ಧರ್ಮಸ್ಥಳದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಾದ ಗುರುಚರಣ್, ದಿವಿತ್, ಮತ್ತು ಉಲ್ಲಾಸ್ ಭಾಗವಹಿಸಿ ಪ್ರಥಮ ಸ್ಥಾನದೊಂದಿಗೆ ಜಿಲ್ಲಾಮಟ್ಟಕ್ಕೆ ಆಯ್ಕೆಯಗಿದ್ದಾರೆ. ಹಾಗೂ ವಿದ್ಯಾರ್ಥಿನಿಯರಾದ ಸ್ವಾತಿ ಮತ್ತು ವೈಷ್ಣವಿ ಇವರ ತಂಡ ದ್ವಿತೀಯ ಸ್ಥಾನ ಪಡೆದಿದೆ. ಇವರಿಗೆ ಶಾಲಾ ದೈಹಿಕ ಶಿಕ್ಷಕ ಸುಭಾಶ್ಚಂದ್ರ ತರಬೇತಿ ನೀಡಿದ್ದರು ಎಂದು ಶಾಲಾ ಮುಖ್ಯ ಶಿಕ್ಷಕಿ ಪರಿಮಳಾ ಎಂ.ವಿ. ತಿಳಿಸಿದ್ದಾರೆ.
ujire_karanji
ujire_karanji1
ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ
ಶ್ರೀ.ಧ.ಮಂ.ಆಂಗ್ಲ ಮಾದ್ಯಮ ಶಾಲೆ, ಧರ್ಮಸ್ಥಳದ ವಿದ್ಯಾರ್ಥಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬರಂಗಾಯ ದಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಭಾಗವಹಿಸಿ ಶೆರಿನ್, ಸುಹಾಸ್ ಪ್ರನ್ವಿತ್, ಪ್ರಮೀತ್, ಕೀರ್ತನ್, ಅಭಿಲಾಷ್, ಫೆಬಿನ್, ಸಿಂಚನ್, ಪ್ರಖ್ಯಾತ್ ಬಳ್ಲಾಲ್ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ದೈಹಿಕ ಶಿಕ್ಷಕ ಸುಭಾಶ್ಚಂದ್ರ ಇವರು ತರಬೇತಿ ನೀಡಿದ್ದರು ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳಾ ಎಂ.ವಿ.ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here