ತೀರ್ಥೋದ್ಭವಕ್ಕೆ ರೆಡಿಯಾಗಿದೆ ತಲಕಾವೇರಿ

0
415

ಕೊಡಗು ಪ್ರತಿನಿಧಿ ವರದಿ
ಕೊಡಗು ಜಿಲ್ಲೆಯ ಐತಿಹಾಸಿಕ ಪುಣ್ಯಕ್ಷೇತ್ರ ತಲಕಾವೇರಿಯಲ್ಲಿ ತೀರ್ಥೋದ್ಭವ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ. ಅಕ್ಟೋಬರ್ 17ರಂದು ಬೆಳಗ್ಗೆ 6.29ಕ್ಕೆ ಶುಭ ತುಲಾ ಲಗ್ನದಲ್ಲಿ ತೀರ್ಥೋದ್ಭವವಾಗಲಿದೆ.
 
 
ಕೊಡಗು ಜಿಲ್ಲಾಧಿಕಾರಿ ರಿಚರ್ಡ್ ವಿನ್ಸೆಂಟ್ ಅವರು ಸಿದ್ಧತಾ ಕಾರ್ಯಗಳ ಪರಿಶೀಲನೆ ನಡೆಸಿದ್ದಾರೆ. ತೀರ್ಥೋದ್ಭವದ ವೇಳೆ 20 ಲಕ್ಷ ಜನರು ಬರುವ ನಿರೀಕ್ಷೆ ಇದೆ. ಭಕ್ತರ ಅನುಕೂಲಕ್ಕಾಗಿ ಶುದ್ಧ ಕುಡಿಯುವ ನೀರುವ ಘಟಕ ಇಡಲಾಗಿದೆ. ತಾತ್ಕಾಲಿಕ ಶೌಚಾಲಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಡಿಸಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
 
 
 
1ತಿಂಗಳ ಕಾಲ ಕೊಡಗು ಏಕೀಕರಣ ರಂಗದಿಂದ ತಲಕಾವೇರಿಯಲ್ಲಿ ನಿರಂತರವಾಗಿ ಭಕ್ತರಿಗೆ ಅನ್ನದಾನ ನಡೆಯಲಿದೆ. ತಲಕಾವೇರಿಗೆ ಬರಲು ವಿವಿಧೆಡೆಯಿಂದ ಬಸ್ ಗಳ ಸೌಲಭ್ಯ ಮಾಡಲಾಗಿದೆ. ವಿರಾಜಪೇಟೆ, ಮಡಿಕೇರಿ, ಗೋಣಿಕೊಪ್ಪ, ಭಾಗಮಂಡಲ ಸೇರಿದಂತೆ ವಿವಿಧೆಡೆಯಿಂದ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.
 
 
 
ಭಾಗಮಂಡಲದಿಂದ ತಲಕಾವೇರಿವರೆಗೆ ದೀಪಾಲಂಕಾರ ಮಾಡಲಾಗಿದೆ. 8 ಕಿ.ಮೀ.ವಿಶೇಷ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಭದ್ರತೆಗಾಗಿ 35 ಸಿಸಿ ಕ್ಯಾಮರಾ, 500 ಪೊಲೀಸ್ ಸಿಬ್ಬಂದಿ, 15 ಪೊಲಿಸ್ ಇನ್ಸ್ ಪೆಕ್ಟರ್ಸ್, 25 ಎಸ್ ಐಗಳ ನಿಯೋಜನೆ ಮಾಡಲಾಗಿದೆ. ಹೊರ ಜಿಲ್ಲೆಗಳ ಪೊಲೀಸ್ ಸಿಬ್ಬಂದಿಯೀ ಸಹ ನಿಯೋಜನೆ ಮಾಡಲಾಗಿದೆ. ಕೊಡಗು ಎಸ್ ಪಿ ರಾಜೇಂದ್ರ ಪ್ರಸಾದ್ ನೇತೃತ್ವದಲ್ಲಿ ಭದ್ರತೆ ಮಾಡಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ರಿಚರ್ಡ್ ವಿನ್ಸೆಂಟ್ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here