ತೀವ್ರಗೊಂಡ ರೈತರ ಹೋರಾಟ

0
254

 
ಗದಗ ಪ್ರತಿನಿಧಿ ವರದಿ
ಕಳಸಾ-ಬಂಡೂರಿ ಹೋರಾಟ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಕಳಸಾ ಬಂಡೂರಿ ಹೋರಾಟ 300ನೇ ದಿನಕ್ಕೆ ಕಾಲಿಟ್ಟಿದೆ.
 
 
ಇಂದು ಕಳಸಾ-ಬಂಡೂರಿ ಹೋರಾಟ ಸಮಿತಿಯವರು ನರಗುಂದ ಪಟ್ಟಣವನ್ನು ಬಂದ್ ಮಾಡಿದ್ದಾರೆ. ರೈತ ಹೋರಾಟಗಾರರು ಹೆದ್ದಾರಿಯ ರಸ್ತೆ ಮಧ್ಯೆದಲ್ಲೇ ಟಯರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಂಗಡಿ ಮುಂಗಟ್ಟು, ಪೆಟ್ರೋಲ್ ಬಂಕ್ ಗಳನ್ನು ಬಂದ್ ಮಾಡಲಾಗಿದೆ. ಸರ್ಕಾರಿ, ಖಾಸಗಿ ಬಸ್ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.
 
 
ಇಂದು ಮುಂಜಾನೆಯಿಂದಲೇ ನೂರಾರು ರೈತರು ಬೀದಿಗಿಳಿದಿದ್ದಾರೆ. ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಸಂಪೂರ್ಣ ಸಂಚಾರ ಅಸ್ತವ್ಯಸ್ತವಾಗಿದೆ.  ಹೋರಾಟ ತೀವ್ರಗೊಂಡ ಹಿನ್ನೆಲೆಯಲ್ಲಿ ಪಟ್ಟಣದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
 
 
ಏನಿದು ಕಳಸಾ-ಬಂಡೂರಿ ಹೋರಾಟ?
ಉತ್ತರ ಕರ್ನಾಟಕದಲ್ಲಿ ಮಹಾದಾಯಿ ನದಿ ಜೋಡಣೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಕಳಸಾ-ಬಂಡೂರಿ ಹೋರಾಟ ಮಾಡುತ್ತಿದ್ದಾರೆ. ದಿನದಿಂದ ದಿನಕ್ಕೆ ಹೋರಾಟದ ಸ್ವರೂಪ ತ್ರೀವವಾಗುತ್ತ ಸಾಗುತ್ತಿದೆ.
 
ನದಿ ಜೋಡಣೆ ಕಾರ್ಯ ಕೈಗೆತ್ತಿಕೊಂಡಾಗಳೆಲ್ಲ ನೆರೆಯ ರಾಜ್ಯ ಗೋವಾ ಮೂರು ಬಾರಿ ಅಡ್ಡಗಲ್ಲು ಹಾಕಿದೆ. ಸುಪ್ರೀಂ ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡು ತನ್ನ ಅರ್ಜಿಯನ್ನು ವಜಾಮಾಡಿಸಿಕೊಳ್ಳುತ್ತಿದೆ.
 
 
ಯೋಜನೆ ಬಗ್ಗೆ…
ಮಹಾದಾಯಿ ನದಿಯನ್ನು ಗೋವಾದ ಜೀವನದಿ ಎಂದು ಕರೆಯುತ್ತಾರೆ. ಸುಮಾರು 77 ಕಿ.ಮೀ. ಇರುವ ಈ ನದಿಯು ಕರ್ನಾಟಕದಲ್ಲಿ ಸುಮಾರು 29 ಕಿ.ಮೀ.ಹರಿಯುತ್ತದೆ. ರಾಜ್ಯದ ಬೆಳಗಾವಿಯ ಮೂಲಕ ಈ ನದಿ ಹರಿದು ಸಮುದ್ರ ಸೇರಿಕೊಳ್ಳುತ್ತದೆ. ಕರ್ನಾಟಕದ ಮೂಲಕ ಹರಿದು ಹೋಗುವ ನೀರನ್ನು ಬಳಸಿಕೊಂಡು, ನೀರನ್ನು ಮಲಪ್ರಭಾ ಡ್ಯಾಂನಲ್ಲಿ ಸಂಗ್ರಹಿಸಿ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವುದು ಮಹಾದಾಯಿ ಅಥವ ಕಳಸಾ-ಬಂಡೂರಿ ಯೋಜನೆಯಾಗಿದೆ.
 
 
ಈ ಹೋರಾಟಕ್ಕೆ ಕಳಸಾ-ಬಂಡೂರಿ ಮತ್ತು ಮಹಾದಾಯಿ ಹೋರಾಟ ಎಂಬ ಹೆಸರಿದೆ. ನೀರನ್ನು ಕಳಸಾ-ಬಂಡೂರಿ ಎಂಬ ಎರಡು ನಾಲೆಗಳ ಮೂಲಕ ಜಲಾಶಯಕ್ಕೆ ಹರಿಸಲು ಯೋಜನೆ ರೂಪಿಸಲಾಗಿದೆ. ಆದ್ದರಿಂದ, ಕಳಸಾ-ಬಂಡೂರಿ ಎಂಬ ಹೆಸರೂ ಇದೆ.

LEAVE A REPLY

Please enter your comment!
Please enter your name here