ತುರ್ತು ಭೂಸ್ಪರ್ಶ

0
150

ದೆಹಲಿ ಪ್ರತಿನಿಧಿ ವರದಿ
ಸ್ಪೈಸ್ ಜೆಟ್ ವಿಮಾನವೊಂದು ತಾಂತ್ರಿಕ ದೋಷ ಸಮಸ್ಯೆಯಿಂದಾಗಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ.
 
 
176 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬೆಂಗಳೂರು-ದೆಹಲಿ ಮಾರ್ಗದ ಸ್ಪೈಸ್ ಜೆಟ್ ಎಸ್ ಜಿ 136 ವಿಮಾನ ಇಂದು ಬೆಳಗ್ಗೆ 8.45ರ ಸುಮಾರಿಗೆ ದೆಹಲಿಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
 
 
ವಿಮಾನದಲ್ಲಿ ಹೈಡ್ರಾಲಿಕ್ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷದ ಕಾರಣ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನ ತುರ್ತು ಭೂಸ್ಪರ್ಶ ವಿಮಾನದಲ್ಲಿದ್ದ ಯಾವುದೇ ಪ್ರಯಾಣಿಕರು ತೊಂದರೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here