ತೆರಿಗೆ ಪಾವತಿ ಪ್ರಮಾಣ ಹೆಚ್ಚಳ

0
297

ರಾಷ್ಟ್ರೀಯ ಪ್ರತಿನಿಧಿ ವರದಿ
ಕಳೆದ 8 ತಿಂಗಳಲ್ಲಿ ಕೇಂದ್ರ ಸರ್ಕಾರದಿಂದ ಹೆಚ್ಚು ತೆರಿಗೆ ಬರುತ್ತಿದೆ. ನೋಟು ಬ್ಯಾನ್ ನಂತರವೂ ತೆರಿಗೆ ಪಾವತಿ ಪ್ರಮಾಣ ಹೆಚ್ಚಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
 
 
 
ನವದೆಹಲಿಯಲ್ಲಿ ಮಾತನಾಡಿದ ಅವರು 2016 ಏಪ್ರಿಲ್-ಡಿಸೆಂಬರ್‍ ನಡುವೆ ತೆರಿಗೆ ಪಾವತಿ ಹೆಚ್ಚಳ ಮಾಡಲಾಗಿದೆ. ಕಳೆದ 8 ತಿಂಗಳಲ್ಲಿ ನೇರ ತೆರಿಗೆ ಪಾವತಿ ಶೇ.12ರಷ್ಟು ಹೆಚ್ಚಳವಾಗಿದೆ. ಪರೋಕ್ಷ ತೆರಿಗೆ ಸಂಗ್ರಹದಲ್ಲೂ ಶೇ.25ರಷ್ಟು ಹೆಚ್ಚಳವಾಗಿದೆ. ಸೇವಾ ತೆರಿಗೆ ಪಾವತಿ ಪ್ರಮಾಣದಲ್ಲಿ ಶೇ.24ರಷ್ಟು ಹೆಚ್ಚಳವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here