ತೊಂದರೆಯಾಗಬಾರದು- ಶಾಸಕ ಕೋಟ್ಯಾನ್ ಖಡಕ್ ಆದೇಶ

0
10869

ಮೂಡುಬಿದಿರೆ:ಕೊರೊನಾ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗುವುದನ್ನು ಸಹಿಸಲಾರೆ. ಯಾವ ರೀತಿಯ ಸಮಸ್ಯೆಯೂ ಆಗದಂತೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಖಡಕ್ ಆದೇಶ ಮಾಡಿದ್ದಾರೆ.
ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭೇಟಿ ನೀಡಿ ಕೊರೋನಾ ಹರಡದಂತೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು ಹಾಗೂ ತುರ್ತು ಸಂದರ್ಭದಲ್ಲಿ ಆಸ್ಪತ್ರೆಯಲ್ಲಿರುವ ಸೌಲಭ್ಯಗಳನ್ನು ಪರಿಶೀಲಿಸಿದರು.
ಈಗ ಕೈಗೊಂಡಿರುವ ಕಾರ್ಯಚಟುವಟಿಕೆಗಳ ಕುರಿತು ವೈದ್ಯಾದಿಕಾರಿಗಳೊಂದಿಗೆ ಚರ್ಚಿಸಿ ಜನರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು.

LEAVE A REPLY

Please enter your comment!
Please enter your name here