ದರ್ಗಾ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ

0
258

ರಾಷ್ಟ್ರೀಯ ಪ್ರತಿನಿಧಿ ವರದಿ
ಮುಂಬೈನ ಹಾಜಿ ಅಲಿ ದರ್ಗಾ ಪ್ರವೇಶಿಸಲು ಮಹಿಳೆಯರಿಗೆ ಇದ್ದ ಎಲ್ಲಾ ಅಡೆತಡೆಗಳು ಇದೀಗ ನಿವಾರಣೆಯಾಗಿದ್ದು, ಮಹಿಳೆಯರು ದರ್ಗಾ ಪ್ರವೇಶ ಮಾಡುವುದಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಹಾಜಿ ಅಲಿ ದರ್ಗಾದ ಟ್ರಸ್ಟ್ ಸೋಮವಾರ ಸುಪ್ರೀಂಕೋರ್ಟ್ ಗೆ ಹೇಳಿದೆ.
 
 
ಹಾಜಿ ಅಲಿ ದರ್ಗಾ ಪ್ರವೇಶಿಸಲು ಮಹಿಳೆಯರಿಗೆ ನಿಷೇಧ ಹೇರಲಾಗಿತ್ತು. ಇದಕ್ಕೆ ಸಾಕಷ್ಟು ಮಹಿಳಾ ಸಂಘಟನೆಗಳು ವಿರೋಧವನ್ನು ವ್ಯಕ್ತಪಡಿಸಿದ್ದರು. ಇದರಂತೆ ಕೆಲ ದಿನ ಹಿಂದೆ ಮಹಿಳೆಯರಿಗೆ ದರ್ಗಾ ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ಬಾಂಬೆ ಹೈಕೋರ್ಟ್ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿದ ದರ್ಗಾ ಟ್ರಸ್ಟ್ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
 
 
ದರಂತೆ ಇಂದು ಈ ಆರ್ಜಿಯನ್ನು ವಿಚಾರಣೆ ನಡೆಸಿರುವ ಸುಪ್ರೀಂ, ದರ್ಗಾಗೆ ಪ್ರವೇಶ ಮಾಡಲು ಮಹಿಳೆಯರಿಗೂ ಅವಕಾಶ ನೀಡಿ. ದರ್ಗಾದಲ್ಲಿ ಸಮಾನತೆಯನ್ನು ಕಾಯ್ದುಕೊಳ್ಳುವಂತೆ ಸೂಚನೆ ನೀಡಿತ್ತು. ಸುಪ್ರೀಂ ತೀರ್ಪಿನಂತೆಯೇ ದರ್ಗಾದ ಟ್ರಸ್ಟ್ ಕೂಡ ಧನಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದು, ಮಹಿಳೆಯರ ಪ್ರವೇಶಕ್ಕೆ ಒಪ್ಪಿಗೆ ಸೂಚಿಸಿದೆ.

LEAVE A REPLY

Please enter your comment!
Please enter your name here