ದಸರಾಗೆ ವಿದ್ಯುಕ್ತವಾದ ಚಾಲನೆ

0
185

ಮೈಸೂರು ಪ್ರತಿನಿಧಿ ವರದಿ
ನಾಡದೇವತೆಗೆ ಪೂಜೆ ಸಲ್ಲಿಸಿದ ಸಿಎಂ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗಿದೆ. ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿ ಚಾಲನೆ ನೀಡಿದ್ದಾರೆ. ನಾಡದೇವತೆ ಚಾಮುಂಡಿ ಸನ್ನಿಧಾನದಲ್ಲಿ ಅದ್ದೂರಿ ಚಾಲನೆ ನೀಡಲಾಗಿದೆ. ದೀಪ ಬೆಳಗಿಸುವ ಮೂಲಕ ನಾಡಹಬ್ಬ ದಸರಾಗೆ ಚಾಲನೆ ನೀಡಲಾಗಿದೆ. ಈ ಮೂಲಕ ಚಾಮುಂಡಿಬೆಟ್ಟದಲ್ಲಿ ದಸರಾ ಹಬ್ಬದ ಸಂಭ್ರಮ ಮೇಳೈಸಿದೆ.
 
 
ನಾಡದೇವತೆ ಚಾಮುಂಡಿ ದೇವಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮೈಸೂರಿನ ಚಾಮುಮಡಿ ಬೆಟ್ಟದಲ್ಲಿ ಸಿಎಂ ಪೂಜೆ ಸಲ್ಲಿಸಿದ್ದಾರೆ. ಸಚಿವರು, ಶಾಸಕರ ಜೊತೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚಾಮುಂಡೇಶ್ವರಿ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ, ಕವಿ ಕಣವಿಯವರು ಪುಷ್ಪಾರ್ಚನೆ ಮಾಡಿದ್ದಾರೆ.
 
 
ಸಂಜೆ ಝಗಮಗಿಸುವ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುವ ಅರಮನೆ ಅಂಗಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಇದೇ ವೇದಿಕೆಯಲ್ಲಿ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭ ಕೂಡ ನಡೆಯಲಿದೆ.
 
 
ಬಿಗಿ ಪೊಲೀಸ್ ಭದ್ರತೆ:
ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ಹೆಚ್ಚಾಗಿದೆ. 4214 ಮಂದಿ ಪೊಲೀಸರನ್ನು ಇಲ್ಲಿ ನಿಯೋಜನೆ ಮಾಡಲಾಗಿದೆ. ಆರ್‌ಎಎಫ್, ಕಮಾಂಡೋ, ಸಿಎಆರ್ ತುಕಡಿಗಳನ್ನೂ ನಿಯೋಜಿಸಲಾಗಿದೆ.

LEAVE A REPLY

Please enter your comment!
Please enter your name here