ದೇಶಪ್ರಮುಖ ಸುದ್ದಿರಾಜ್ಯವಾರ್ತೆ

ದಸರಾ ಉದ್ಘಾಟನೆಗಾಗಿ ಬಂದ ಕಣವಿ

ಮೈಸೂರು ಪ್ರತಿನಿಧಿ ವರದಿ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2016ರ ಉದ್ಘಾಟನೆಗಾಗಿ ಹಿರಿಯ ಕವಿ ಚನ್ನವೀರ ಕಣವಿ ಮೈಸೂರಿಗೆ ಬಂದಿಳಿದಿದ್ದಾರೆ.
 
 
ಧಾರವಾಡದಿಂದ ರೈಲಿನಲ್ಲಿ ಮೈಸೂರಿಗೆ ಆಗಮಿಸಿದ್ದಾರೆ. ರೇಲ್ವೆ ನಿಲ್ದಾಣಕ್ಕೆ ಬಂದಿಳಿದ ಹಿರಿಯ ಕವಿಯನ್ನು ಮೈಸೂರು ಪೇಟ ತೊಡಿಸಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಗಿದೆ.
 
ಸಂಸದ ಪ್ರತಾಪ ಸಿಂಹ ಅವರು ಕಣವಿಯವರನ್ನು ಸ್ವಾಗತಿಸಿದ್ದಾರೆ. ಅಕ್ಟೋಬರ್ 1ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ನಡೆಯಲಿದೆ. ಅ.1ರಿಂದ 11ರವರೆಗೆ ನಾಡಹಬ್ಬ ದಸರಾ ನಡೆಯಲಿದೆ.
 
ಹಿರಿಯ ಕವಿ ಚೆನ್ನವೀರ ಕಣವಿ ಸ್ವಾಗತಕ್ಕೆ ಮೈಸೂರು ಜಿಲ್ಲಾಧಿಕಾರಿ ಬರಲಿಲ್ಲ. ಜಿಲ್ಲಾಧಿಕಾರಿ ಬದಲು ಮೈಸೂರು ತಹಶೀಲ್ದಾರ್ ರಮೇಶ್ ಬಾಬು ಅವರು ಹೂಗುಚ್ಛ ನೀಡಿ ಕಣವಿಯವರನ್ನು ಸ್ವಾಗತಿಸಿದ್ದಾರೆ.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.
Latest Posts

Comment here