ದಸರಾ ಉದ್ಘಾಟನೆಗೆ ಕಣವಿ ಬಹುತೇಕ ಖಚಿತ

0
257

ಬೆಂಗಳೂರು ಪ್ರತಿನಿಧಿ ವರದಿ
ನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಹೊಸಗನ್ನಡದ ಖ್ಯಾತ ಕವಿ ಚನ್ನವೀರ ಕಣವಿ ಉದ್ಘಾಟಿಸುವುದು ಬಹುತೇಕ ಖಚಿತವಾಗಿದೆ. ದಸರಾ ಉದ್ಘಾಟಿಸುವಂತೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕಣವಿ ಅವರಿಗೆ ಮನವಿ ಮಾಡಿಕೊಂಡಿದ್ದು, ಅದಕ್ಕೆ ಅವರು ಸಮ್ಮತಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.
 
 
ದಸರಾ ಉದ್ಗಾಟನೆಗೆ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌. ದೊರೆಸ್ವಾಮಿ, ಖ್ಯಾತ ಕ್ರಿಕೆಟ್‌ ತಾರೆ ಸಚಿನ್‌ ತೆಂಡೂಲ್ಕರ್‌, ಸಾಹಿತಿ ಎಸ್‌.ಎಲ್‌. ಭೈರಪ್ಪ, ಕವಿಗಳಾದ ಚನ್ನವೀರ ಕಣವಿ, ಕೆ.ಎಸ್‌.ನಿಸಾರ್‌ ಅಹ್ಮದ್‌ ಅವರ ಹೆಸರುಗಳು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪ್ರಸ್ತಾಪಕ್ಕೆ ಬಂದಿದ್ದವು.

LEAVE A REPLY

Please enter your comment!
Please enter your name here