ದಿ. ಜವಹರಲಾಲ್ ನೆಹರು ಚಿಂತನೆ ಎಲ್ಲಾ ಕಾಲಕ್ಕೆ ಪ್ರಸ್ತುತ

0
330

 
ಬೆಂಗಳೂರು ಪ್ರತಿನಿಧಿ ವರದಿ
ಮಾಜಿ ಪ್ರಧಾನಿ ದಿ. ಜವಹರ್ ಲಾಲ್ ನೆಹರು ಚಿಂತನೆ ಎಲ್ಲಾ ಕಾಲಕ್ಕೂ ಪ್ರಸ್ತುತ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
 
 
 
ಮಾಜಿ ಪ್ರಧಾನಿ ಜವಹರ ಲಾಲ್ ನೆಹರು ಅವರ 52ನೇ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಇಂದು ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದ್ದರೂ ಕೃಷಿ ಕ್ಷೇತ್ರಕ್ಕೆ ಒತ್ತು ನೀಡುತ್ತಾ ಕೈಗಾರಿಕೆಗಳನ್ನು ಹೆಚ್ಚು ಪ್ರಾರಂಭಿಸುವುದರಿಂದಲೂ ದೇಶ ಅಭಿವೃದ್ಧಿಯತ್ತ ಸಾಗುತ್ತದೆ ಎಂಬ ವಿಶ್ವಾಸ ಹೊಂದಿ ಪ್ರಮುಖ ಉದ್ದಿಮೆಗಳನ್ನು ಪ್ರಾರಂಭಿಸಿ ಆ ಮೂಲಕ ಉದ್ಯೋಗ ಸೃಷ್ಠಿಗೂ ಕಾರ್ಯಕ್ರಮ ಹಮ್ಮಿಕೊಂಡು ಉತ್ತಮ ಆಡಳಿತ ನೀಡಿದರು ಎಂದು ಸ್ಮರಿಸಿದರು.
 
 
 
ದೇಶದ ಭದ್ರತೆಗೂ ಹೆಚ್ಚು ಒತ್ತು ನೀಡಿ ಕೆಲಸ ಮಾಡಿದ ಅವರು ಹಲವು ದಶಕಗಳ ಕಾಲ ಮಹಾತ್ಮ ಗಾಂಧೀಜಿ ಅವರ ಜೊತೆ ಸೇರಿ ದೇಶಕ್ಕೆ ಸ್ವಾತಂತ್ರ್ಯ ತರಲು ಹೋರಾಟ ಮಾಡಿದ ಅವರು ದಕ್ಷ ಆಡಳಿತಗಾರರಾಗಿದ್ದು ದೇಶದ ಸರ್ವಾಂಗೀಣ ಪ್ರಗತಿಗೆ ಕೆಲಸಮಾಡಿದರು ಎಂದು ತಿಳಿಸಿದರು.
 
 
 
ಮೂಡಿಗೆರೆ ಕ್ಷೇತ್ರದ ಶಾಸಕ ಬಿ.ಬಿ. ನಿಂಗಯ್ಯ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅನಿಲ್‍ಕುಮಾರ್ ಸೇರಿದಂತೆ ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here